
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮೇ. 19: ಉತ್ತರ ಕರ್ನಾಟಕ ಸಣ್ಣ ಕೈಗಾರಿಕಾ ಸಂಘಟನೆಯಿಂದ ಹ್ಯಾಲೀಸ್‌ಬ್ಲೂ ಸ್ಟೀಲ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ “ಉದ್ಯಮಿ ಮಿತ್ರ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ವಿಶ್ವಮೂರ್ತಿ ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿದರು.
ಸ್ಥಳೀಯ ಉದ್ಯಮ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕಾ ವಿಕಾಸದಲ್ಲಿ ಸಂಸ್ಥೆಯ ಕೊಡುಗೆ ಅಮೂಲ್ಯವಾಗಿದ್ದು, ಅದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸಂಸ್ಥೆಯ ಸೇವೆ ಮತ್ತು ಭದ್ರತೆಗೆ ಸಂಘಟನೆಯು ಹೃತ್ಪೂರ್ವಕವಾಗಿ ಶ್ಲಾಘನೆ ವ್ಯಕ್ತಪಡಿಸಿದೆ.
…