೭೯ ನೇ ಸ್ವಾತಂತ್ರ‍್ಯ ದಿನಾಚರಣೆ


ಬಾದಾಮಿ,ಂ.೧೭: ಬಾದಾಮಿ, ಗುಳೇದಗುಡ್ಡ, ಕೆರೂರ ಸೇರಿದಂತೆ ಬಾದಾಮಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಮುಖ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸುತ್ತಿದ್ದೇನೆ ಎಂದು ಶಾಸಕ, ತೋಟಗಾರಿಕೆ ವಿವಿ ವ್ಯವಸ್ಥಾಪನ ಮಂಡಳಿಯ ಸದಸ್ಯ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.


ಅವರು ಪಟ್ಟಣದ ಹೊರವಲಯದ ಎಪಿಎಂಸಿ ಆವರಣದಲ್ಲಿ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ೭೯ ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಶೀಲದಾರ ಕಾವ್ಯಶ್ರೀ ಎಚ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ೭೯ ನೇ ಸ್ವಾತಂತ್ರö್ಯ ದಿನಾಚರಣೆಯ ಸಂದರ್ಭದಲ್ಲಿ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು.


ಭಾರತದ ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಬದ್ಧತೆಯನ್ನು ಒತ್ತಿ ಹೇಳುತ್ತದೆ. ಯೋಧರಿಗೆ ಮತ್ತು ರೈತರಿಗೆ ನಮಸ್ಕರಿಸಿ ಸ್ವಾತಂತ್ರö್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಹೇಳಿದರು. ವೇದಿಕೆಯ ಮೇಲೆ ತಾ.ಪಂ.ಇಒ ಸತೀಶ ಮಾಕೊಂಡ, ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟೀಮನಿ, ಪುರಸಭೆ ಸದಸ್ಯರಾದ ಮಂಜುನಾಥ ಹೊಸಮನಿ, ಶಂಕರ ಕನಕಗಿರಿ, ಯಮುನಾ ಹೊಸಗೌಡ್ರ, ರಾಮವ್ವ ಪೂಜಾರ, ಪರಶುರಾಮ ರೋಣದ, ಗೌರಮ್ಮ ಬೇಲೂರಪ್ಪನ್ನವರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವುಕುಮಾರ ಹಿರೇಮಠ, ಸದಸ್ಯರಾದ ಹನಮಂತ ಅಪ್ಪನ್ನವರ, ಭರಮಪ್ಪ ಕಾಟನ್ನವರ, ಸಿಪಿಐ ಕರೆಪ್ಪ ಬನ್ನೆ, ಪಿ.ಎಸ್.ಐ.ಹನಮಂತ ನೆರಳೆ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ, ತಾಲೂಕಾ ಆರೋಗ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಬಂದೇನವಾಜ ಡಾಂಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ಬಿಸಿಎಂ ಅಧಿಕಾರಿ ಹೇಮಲತಾ ಸಿಂಧೆ, ಸೇರಿದಂತೆ ತಾಲೂಕಾಮಟ್ಟದ ಅಧಿಕಾರಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಸಕರು ಅಂಧರಿಗೆ ಟಾಕಿಂಗ್ ಲ್ಯಾಪಟಾಪ್, ವಿವಿದ ಸಾಧಕರಿಗೆ ಸನ್ಮಾನ, ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.


ಇದೇ ಸಂದರ್ಭದಲ್ಲಿ ನಿವೃತ್ತ ಸೈನಿಕರನ್ನು ಹಾಗೂ ವಿವಿದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸದಾಶಿವ ಮರಡಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ನಂತರ ಶಾಲಾ ಮಕ್ಕಳಿಂದ ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.