Home ಜಿಲ್ಲೆ ಮಂಗಳೂರು ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (೨೫), ಮೊಹಮ್ಮದ್ ಆಸೀಕ್ (೨೫) ಮೊಹಮ್ಮದ್ ಸಿರಾಜ್ (೨೮) ಹಾಗೂ ತಮಿಳುನಾಡು ಕರೂರು ನಿವಾಸಿ ಶಕ್ತಿವೇಲು ಜಿ (೨೪) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ ಕಳ್ಳತನ ಮಾಡಿದ ಕಾರು ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಚಾರಣೆಯ ವೇಳೆ ಆರೋಪಿಗಳು ಕಾರನ್ನು ಕಳವು ಮಾಡಿ, ಕೇರಳಕ್ಕೆ ತೆಗೆದುಕೊಂಡು ಹೋಗಿ, ಕೇರಳದಿಂದ ತಮಿಳುನಾಡಿನಲ್ಲಿ ಮಾರಾಟ ಮಾಡಿದ್ದು, ತಮಿಳುನಾಡಿನಲ್ಲಿ ಸದ್ರಿ ವಾಹನವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿರುವುದಾಗಿ ತಿಳಿದು ಬಂದಿದೆ.
ಆರೋಪಿಗಳ ವಿರುದ್ಧ ಬದಿಯಡ್ಕ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.