
ಸುಳ್ಯ:ಬೆಳ್ಳಾರೆ ಗ್ರಾಮದ ಕಲ್ಲೋಣಿ ಸುಜನ್ ಶೆಟ್ಟಿಯವರ ಅಡಕೆ ಹಾಗೂ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ.
ವಿದ್ಯುತ್ ಶಾರ್ಟ್ ಸಕ್ಯೂಟ್ ಆಗಿ ಬೆಂಕಿ ಹತ್ತಿದ್ದು ಅಡಕೆ ಮತ್ತು ರಬ್ಬರ್ ತೋಟಕ್ಕೆ ವ್ಯಾಪಿಸಿದೆ. ಕೂಡಲೇ ಅಗ್ನಿಶಾಮಕದವರಿಗೆ ಮಾಹಿತಿ ನೀಡಿದ್ದು ಅಗ್ನಿಶಾಮಕದಳದವರು ಆಗಮಿಸಿ ಬೆಂಕಿ ನಂದಿಸಿದರೂ ಮತ್ತೆ ಬೆಂಕಿ ಕಾಣಿಸಿಕೊಂಡಿತು. ಬಳಿಕ ಸ್ಥಳೀಯರ ಸಹಕಾರದಿಂದ ಬಳಿಕ ಬೆಂಕಿ ನಂದಿಸಲಾಯಿತು. ಘಟನೆ ಹಲವು ಗಿಡಗಳು ಬೆಂಕಿಗೆ ಆಹುತಿಯಾಗಿದೆ.
























