
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಅ.30: ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಸುಮಾರು ?36 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಟಿಎಪಿಸಿಎಂಎಸ್ ಕಚೇರಿ ಹಾಗೂ ಗೋದಾಮು ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಜನಪ್ರಿಯ ಶಾಸಕ ಹೆಚ್.ಟಿ.ಮಂಜು ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಕಲ್ಪಿಸುವುದು ಮುಖ್ಯವಾಗಿದೆ.
ಕಚೇರಿ ಹಾಗೂ ಗೋದಾಮು ಕಟ್ಟಡ ನಿರ್ಮಾಣದಿಂದ ಸಂಸ್ಥೆಯ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗಲಿದ್ದು, ರೈತರು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ಸದಸ್ಯರು ಶಾಸಕ ಹೆಚ್.ಟಿ.ಮಂಜು ಅವರನ್ನು ಸನ್ಮಾನಿಸಿ, ಗೌರವಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಮಲ್ಲೇನಹಳ್ಳಿ ಮೋಹನ್ ಅವರು ಮಾತನಾಡಿ, ಕಟ್ಟಡ ಕಾಮಗಾರಿಯ ಉದ್ದೇಶ ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷ ತೆರ್ನೇನಹಳ್ಳಿ ಬಲದೇವ್, ಟಿಎಪಿಸಿಎಂಎಸ್ ಉಪಾಧ್ಯಕ್ಷೆ ಲತಾಮಣಿ ಮಂಜೇಗೌಡ,ನಿರ್ದೇಶಕರಾದ ಹೆಚ್.ಟಿ.ಲೋಕೇಶ್, ಎಸ್.ಎಲ್. ಮೋಹನ್, ಕೆ.ಬಿ.ಮಧು, ನಾಗರಘಟ್ಟ ದಿಲೀಪ್ ಕುಮಾರ್, ಕೆ.ಬಿ.ನಾಗೇಶ್, ಮಂಜುನಾಥ್, ಜ್ಯೋತಿ, ರಾಯಸಮುದ್ರ ತಮ್ಮಣ್ಣ ಹಾಗೂ ಸಂಸ್ಥೆಯ ಕಾರ್ಯದರ್ಶಿ ಬೋರೇಗೌಡ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದು, ಕಾಮಗಾರಿಗೆ ಚಾಲನೆ ನೀಡಿದ ಶಾಸಕರಿಗೆ ಸಾಥ್ ನೀಡಿದರು.
























