Home ಜಿಲ್ಲೆ ಮೈಸೂರು ಅರಣ್ಯದಲ್ಲಿ ಎμÉ್ಟೀ ಕಷ್ಟಗಳು ಬಂದರೂ ನೌಕರರು ಕುಗ್ಗಬಾರದು: ಬಿ.ಕೆ.ಸಿಂಗ್

ಅರಣ್ಯದಲ್ಲಿ ಎμÉ್ಟೀ ಕಷ್ಟಗಳು ಬಂದರೂ ನೌಕರರು ಕುಗ್ಗಬಾರದು: ಬಿ.ಕೆ.ಸಿಂಗ್

ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.05-
ಅರಣ್ಯದಲ್ಲಿ ಸೇವೆ ಸಲ್ಲಿಸುವ ಅರಣ್ಯ ನೌಕರರು ಎಂತಹ ಕಷ್ಟಗಳು ಎದುರಾದರೂ ಧೈರ್ಯದಿಂದ ಎದುರಿಸುವ ಛಲ ಹೊಂದಿರಬೇಕು ಎಂದು ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥ ಬಿ.ಕೆ. ಸಿಂಗ್ ಹೇಳಿದರು
ಚಾಮರಾಜನಗರ ತಾಲ್ಲೂಕಿನ ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ಬೂದಿಪಡಗದಲ್ಲಿ 72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯ ನೌಕರರಿಗೆ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಅರಣ್ಯ ಪ್ರದೇಶವಿದ್ದು, ಇಂತಹ ಅರಣ್ಯದಲ್ಲಿ ಸೇವೆ ಸಲ್ಲಿಸುವುದು ಪುಣ್ಯದ ಕೆಲಸ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆಯ ನೌಕರರು ಸಾರ್ವಜನಿಕರಿಗೂ ಅರಿವು ಮೂಡಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಕಾಡುಗಳ್ಳ ವೀರಪ್ಪನ್ ಹಾವಳಿ ಇದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆ ಯಲ್ಲಿ ಅರಣ್ಯ ಅಧಿಕಾರಿಯಾಗಿ ಹಲವು ಸವಾಲುಗಳನ್ನು ಎದುರಿಸಿದ್ದೇನೆ. ಅಂದು ತಮಿಳುನಾಡು ಹಾಗೂ ಕರ್ನಾಟಕದ ಪೆÇಲೀಸ್ ಅಧಿಕಾರಿಗಳೊಂದಿಗೆ ಸೇರಿ ಹಲವು ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದೆ. ಆ ಸಂದರ್ಭದಲ್ಲಿ ಸರ್ಕಾರದಿಂದ ನಮಗೆ ಡಬಲ್ ಬ್ಯಾರೆಲ್ ಬಂದೂಕುಗಳಂತಹ ಸೀಮಿತ ಸೌಲಭ್ಯಗಳμÉ್ಟೀ ಲಭ್ಯವಿದ್ದವು. ಆದರೆ ಇಂದು ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ಹೇಳಿದರು.
ಅರಣ್ಯದಲ್ಲಿ ವನ್ಯಜೀವಿಗಳ ಬೇಟೆ ಸೇರಿದಂತೆ ಅಕ್ರಮ ಚಟುವಟಿಕೆಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ನಿಯಮಾನುಸಾರ ಕ್ರಮಕ್ಕೆ ಮುಂದಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ಎದುರಾದರೂ, ಕಾರ್ಯಾಚರಣೆ ನಿಯಮಾನುಸಾರ ನಡೆದಿದ್ದರೆ ಅಧಿಕಾರಿಗಳು ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಬಿ.ಕೆ. ಸಿಂಗ್ ಹೇಳಿದರು.


ಚಾಮರಾಜನಗರ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಮಾಲತಿ ಪ್ರಿಯಾ, ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಚಾಮರಾಜನಗರ ಜಿಲ್ಲೆ ಹುಲಿಗಳ ತಾಣವಾಗಿ ಗುರುತಿಸಿಕೊಂಡಿದೆ. 72ನೇ ವನ್ಯಜೀವಿ ಸಪ್ತಾಹ ಆಚರಿಸುತ್ತಿರುವುದು ಸಂತಸದ ವಿಷಯ ಎಂದರು.
ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ 68 ಹುಲಿಗಳಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಅರಣ್ಯ ಪಾಲಕರು ಯಾವೆಲ್ಲ ರೀತಿಯಲ್ಲಿ ಕಾಡು ಮತ್ತು ವನ್ಯಜೀವಿಗಳನ್ನು ಸಂರಕ್ಷಿಸಬಹುದು ಎಂಬುದರ ಕುರಿತು ಕಾರ್ಯಾಗಾರದಲ್ಲಿ ಅನುಭವ ಹೊಂದಿರುವ ಹಿರಿಯ ಅರಣ್ಯ ಅಧಿಕಾರಿಗಳು ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.


ಕಾರ್ಯಾಗಾರದಲ್ಲಿ ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಕ (ವನ್ಯಜೀವಿ) ವಿಜಯಕುಮಾರ್ ಗೋಗಿ ಹಾಗೂ ಅಜಯ್ ಮಿಶ್ರಾ ಅವರು ವಿವಿಧ ವಿಷಯಗಳ ಕುರಿತು ವಿಚಾರ ಮಂಡಿಸಿದರು.
ಈ ಸಂದರ್ಭದಲ್ಲಿ ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಶ್ರೀಪತಿ ಬಿ.ಎಸ್., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಪವನ್ ಕುಮಾರ್ ಮೀನಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹಾಲಕ್ಷ್ಮಿ ಸೇರಿದಂತೆ ಜಿಲ್ಲೆಯ ಅರಣ್ಯ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.