Home ಜಿಲ್ಲೆ ಮೈಸೂರು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸ್ವಚ್ಚತೆ ಬಹಳ ಮುಖ್ಯ:ಶಾಸಕ ಮಂಜು

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸ್ವಚ್ಚತೆ ಬಹಳ ಮುಖ್ಯ:ಶಾಸಕ ಮಂಜು

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಸೆ.21:
ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ನಗರವಾಸಿಗಳು ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳುವುದು ಅವಶ್ಯಕ ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.


ಅವರು ಪುರಸಭಾ ಕಾರ್ಯಲಯದ ವತಿಯಿಂದ ಪಟ್ಟಣದ ಗಣಪತಿ ಪಾರ್ಕಿನಲ್ಲಿ ಆಯೋಜಿಸಿದ್ದ ಸ್ವಚ್ಚತೋತ್ಸವ ಕಾರ್ಯಕ್ರಮವನ್ನು ಸಂಕಷ್ಟಹರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಸಗುಡಿಸಿ ಕಸ ವಿಭಾಗಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.


ಪಟ್ಟಣದ ನಿವಾಸಿಗಳು ತಮ್ಮ ಮನೆಯಲ್ಲಿ ದೊರೆಯುವ ಕಸವನ್ನು ಇದುವರೆವಿಗೂ ಹಸಿಕಸ ಮತ್ತು ಒಣಕಸಗಳಾಗಿ ವಿಂಗಡಿಸಿ ಕಸ ನೀಡುತ್ತಿದ್ದರು. ಆದರೆ ಅದೇ ಕಸವನ್ನು ನಾಲ್ಕು ಭಾಗಗಳಾಗಿ ವಿಭಾಗಿಸಿ ವಿಲೇವಾರಿ ಮಾಡುವ ಮೂಲಕ ಪಟ್ಟಣದ ಸ್ವಚ್ಚತೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು. ಪಟ್ಟಣದಲ್ಲಿ ಪ್ರತಿದಿನ ಹದಿನೈದು ಟನ್ ಕಸ ಸಂಗ್ರಹವಾಗುತ್ತದೆ ಇಷ್ಟು ಪ್ರಮಾಣದ ಕಸವನ್ನು ಕೇವಲ 15-20 ಪೌರಕಾರ್ಮಿಕರು ವಿಲೇವಾರಿ ಮಾಡುವುದು ಬಹಳ ಕಷ್ಟ. ಆದ್ದರಿಂದ ಸಾರ್ವಜನಿಕರು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿ ಪುರಸಭೆಯ ವಾಹನಕ್ಕೆ ನೀಡಿದರೆ ವಿಲೇವಾರಿ ಸುಲಭವಾಗುತ್ತದೆ. ಆ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡಿದಂತಾಗುತ್ತದೆ ಎಂದರು.


ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಚಂದ್ರಶೇಖರ್,ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮೋಹನ್, ಯುವ ಜೆಡಿಎಸ್ ಅಧ್ಯಕ್ಷ ಮಹದೇವೇಗೌಡ. ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಲದೇವ್, ಪುರಸಭಾ ಮಾಜಿ ಸದಸ್ಯರುಗಳಾದ ಹೇಮಂತ್ ಕುಮಾರ್. ಗಿರೀಶ್. ಪ್ರೇಂಕುಮಾರ್. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ್ ಕುಮಾರ್. ಪುರಸಭಾ ಮುಖ್ಯಾಧಿಕಾರಿ ಅಶೋಕ್. ಆರೋಗ್ಯಾಧಿಕಾರಿ ಅಶೋಕ್. ಸೇರಿದಂತೆ ನೂರಾರು ಸಾರ್ವಜನಿಕರು ಹಾಜರಿದ್ದರು.