
ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರ ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಎರಡು ಹಾಡುಗಳು ಹಾಗೂ ಟ್ರೇಲರ್ ಅಭಿಮಾನಿಗಳ ಮನ ಗೆದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆ ಕಂಡಿತ್ತು.
ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ. ಕಾಂತರಾಜ್ ಸಂಭಾಷಣೆ ಬರೆದಿದ್ದಾರೆ. ತಶ್ವಿನಿ ವೀರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ದರ್ಶನ್ ಅವರಿಗೆ ನಾಯಕಿಯಾಗಿ ರಚನ ರೈ ಅಭಿನಯಿಸಿದ್ದಾರೆ. ಶರ್ಮಿಳಾ ಮಾಂಡ್ರೆ, ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್, ಹುಲಿ ಕಾರ್ತಿಕ್, ಸೋನಿಯಾ, ಯುವರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

























