Home ಜಿಲ್ಲೆ ಬೆಂಗಳೂರು ಇಂದಿರಾ ಕಿಟ್ ಘೋಷಣೆ: ಅಶೋಕ್ ಅಸಮಾಧಾನ

ಇಂದಿರಾ ಕಿಟ್ ಘೋಷಣೆ: ಅಶೋಕ್ ಅಸಮಾಧಾನ


ಬೆಂಗಳೂರು, ಜು. ೩- ಕಡು ಬಡವರಿಗೆ ಪಡಿತರ ವ್ಯವಸ್ಥೆಯಲ್ಲಿ ಇಂದಿರಾಕಿಟ್ ವಿತರಿಸುವ ಸರ್ಕಾರದ ಘೋಷಣೆ ಜಾರಿಯಾಗದಿರುವ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು
ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಹುಪ್ರಚಾರಿತ ಭರವಸೆ ನೆಲಕಚ್ಚಿದೆ. ಬಡ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ತೊಗರಿಬೇಳೆ, ಅಡುಗೆ ಎಣ್ಣೆ, ಉಪ್ಪು, ಸಕ್ಕರೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳನ್ನು ಒಳಗೊಂಡ ’ಇಂದಿರಾ ಕಿಟ್’ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಲಾಗಿತ್ತು. ಆದರೆ ಯೋಜನೆ ಜಾರಿಯಾಗುವ ಮೊದಲುವೇ ಕೈಬಿಡಲಾಗಿದೆ ಎಂಬ ವರದಿಗಳು ಸರ್ಕಾರದ ಅಸಮರ್ಥತೆ, ದಿವಾಳಿತನ ಮತ್ತು ಆಡಳಿತ ವೈಫಲ್ಯವನ್ನು ಬಯಲಿಗೆಳೆದಿವೆ. ಎಂದಿದ್ದಾರೆ ಟೆಂಡರ್ ಪ್ರಕ್ರಿಯೆ ವಿವಾದ, ಆಡಳಿತಾತ್ಮಕ ಗೊಂದಲ ಮತ್ತು ಭಾರೀ ವಿಳಂಬದ ನಡುವೆ ಸಿಲುಕಿ, ಎಂಟು ತಿಂಗಳಾದರೂ ಅಂತಿಮಗೊಳ್ಳಲಿಲ್ಲ. ಈಗ ಇಡೀ ಯೋಜನೆಯನ್ನೇ ಕೈಬಿಟ್ಟಿರುವುದು, ನಾಡಿನ ಕೋಟ್ಯಂತರ ಬಡ ಕುಟುಂಬಗಳ ನಿರೀಕ್ಷೆಗೆ ತಣ್ಣೀರೆರಚಿದಂತಾಗಿದೆ.
ಟೆಂಡರ್ ಪ್ರಕ್ರಿಯೆಯಲ್ಲಿನ ಗೊಂದಲಗಳಿಗೆ ಯಾರು ಹೊಣೆ ಘೋಷಿಸಿದ ಯೋಜನೆಯನ್ನು ಜಾರಿಗೊಳಿಸುವ ಸಾಮರ್ಥ್ಯವೇ ಸರ್ಕಾರಕ್ಕೆ ಇರಲಿಲ್ಲವೇ?b ೧.೨೫ ಕೋಟಿ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ನೀಡುವ ಮಾತು ಕೊಟ್ಟ ಸರ್ಕಾರ, ಈಗ ಆ ಮಾತಿನಿಂದ ಏಕೆ ಹಿಂದೆ ಸರಿಯಿತು ಎಂದು ಪ್ರಶ್ನಿಸಿದ್ದಾರೆ ಗ್ಯಾರಂಟಿಗಳ ಹೆಸರಿನಲ್ಲಿ ಬೊಕ್ಕಸ ಖಾಲಿ ಮಾಡಿ, ಈಗ ಬಡವರ ಹೊಟ್ಟೆಯ ಮೇಲೆಯೇ ತಣ್ಣೀರು ಬಟ್ಟೆ ಹಾಕುತ್ತಿದ್ದೀರಾ
ಇದು ಕೇವಲ ಒಂದು ಯೋಜನೆ ರದ್ದಾಗಿರುವ ವಿಷಯವಲ್ಲ. ಇದು ನಿಮ್ಮ ಸರ್ಕಾರದ ಆಡಳಿತ ವೈಫಲ್ಯ, ಆರ್ಥಿಕ ದಿವಾಳಿತನ ಮತ್ತು ಕೊಟ್ಟ ಮಾತಿಗೆ ಬೆಲೆ ಇಲ್ಲದ ವಚನ ಭ್ರಷ್ಟ, ವಿಶ್ವಾಸಘಾತುಕ ರಾಜಕಾರಣಕ್ಕೆ ಜೀವಂತ ಸಾಕ್ಷಿ. ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಮೊದಲು ಭರ್ಜರಿ ಘೋಷಣೆ… ನಂತರ ಕೋಟ್ಯಾಂತರ ರೂಪಾಯಿ ಪ್ರಚಾರ… ಕೊನೆಗೆ ಮೌನವಾಗಿ ಯೋಜನೆಗೆ ಕತ್ತರಿ. ಇದೇನಾ ನಿಮ್ಮ “ಕರ್ನಾಟಕ ಮಾದರಿ” ಎಂದು ವ್ಯಂಗ್ಯವಾಡಿದ್ದಾರೆ