Home ಜಿಲ್ಲೆ ಮೈಸೂರು ಇಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಸಂಜೆವಾಣಿ ವಾರ್ತೆ
ಚಾಮರಾಜನÀಗರ, ಸೆ.30-
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 1,15,291 ಲಕ್ಷ ರೂ.ಗಳ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಇಂದು ಅಗಮಿಸಲಿದ್ದಾರೆ. ಇದಕ್ಕಾಗಿ ನಗರದ ಎಂಜಿಎಸ್‍ವಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ.
ಸಿಎಂ ಕಾರ್ಯಕ್ರಮದ ಬಗ್ಗೆ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಮಾತನಾಡಿದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ, ಸಿಎಂ ಡಿಕೆಶಿ ಅವರು, ಮಧ್ಯಾಹ್ನ 12 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ಹುಲಸಗುಡ್ಡ ಹೆಲಿಪ್ಯಾಡ್‍ಗೆ ಆಗಮಿಸುವ ಅವರು, ಅಲ್ಲಿಂದ ಮಧ್ಯಾಹ್ನ 12.30 ಕ್ಕೆ ಕೊಳ್ಳೇಗಾಲ ಪಟ್ಟಣದ ಎಂ.ಜಿಎಸ್‍ವಿ ಕಾಲೇಜು ಮೈದಾನದಲ್ಲಿ ಹಾಕಿರುವ ಬೃಹತ್ ವೇದಿಕೆಗೆ ಆಗಮಿಸಲಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಕೊಳ್ಳೇಗಾಲ ಮತ್ತು ಹನೂರು ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಗಾಟನೆ ಮತ್ತು ಸರ್ಕಾರ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಎಂದರು.


ವಿವಿಧ ಕಾಮಗಾರಿಗಳ ವಿವರ : 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಯಳಂದೂರು ತಾಲೂಕು ಅಸ್ಪತ್ರೆಯನ್ನು 100 ಹಾಸಿಗೆಗಳ ಕಟ್ಟಡ ಉದ್ಘಾಟನೆ, 65 ಲಕ್ಷ ರೂ. ವೆಚ್ಚದಲ್ಲಿ ಕೊಳ್ಳೇಗಾಲದಲ್ಲಿ ತಾಲೂಕು ಮಟ್ಟದ ಆಸ್ಪತ್ರೆ ಓವರ್‍ಹೆಡ್ ಟ್ಯಾಂಕ್ ನಿರ್ಮಾಣ, ಮತ್ತು ವಸತಿ ಗೃಹಗಳ ಹಾಗು ಮೂಲಭೂತ ಸೌಲಭ್ಯ ಮತ್ತು ಉನ್ನೀತಕರಣ ಕಾಮಗಾರಿ ಶಂಕುಸ್ಥಾಪನೆ,


55 ಲಕ್ಷ ರೂ. ವೆಚ್ಚದಲ್ಲಿ ಕೊಳ್ಳೇಗಾಲ ಅಸ್ಪತ್ರೆಯಲ್ಲಿ ಪ್ರಯೋಗಾಲಯ ಕಟ್ಟಡ ಉದ್ಗಾಟನೆ, 55 ಲಕ್ಷ ರೂ. ವೆಚ್ಚದಲ್ಲಿ ಯಳಂದೂರಿನಲ್ಲಿ ಪ್ರಯೋಗಾಲಯ ಕಟ್ಟಡ ಉದ್ಗಾಟನೆ, 4 ಕೋಟಿ ರೂ. ವೆಚ್ಚದಲ್ಲಿ ಯಳಂದೂರು ತಾಲೂಕಿನ ಮದ್ದೂರು ಗ್ರಾಮದಲ್ಲಿ ಸುವರ್ಣವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಗಾಟನೆ, 7 ಕೋಟಿ ರೂ. ವೆಚ್ಚದಲ್ಲಿ ಮೆಟ್ರಿಕ್ ಪೂರ್ವ ಬಾಲಕರ ಕಟ್ಟಡ ಉದ್ಗಾಟನೆ, 7.20 ಕೋಟಿ ರೂ. ವೆಚ್ಚದಲ್ಲಿ ಕೊಳ್ಳೇಗಾಲ ಪಟ್ಟಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನ ಉದ್ಘಟನೆ,


3.26 ಕೋಟಿ ವೆಚ್ಚದಲ್ಲಿ ಕೊಳ್ಳೇಗಾಲ ಪಟ್ಟಣÀದಲ್ಲಿ ನಿರ್ಮಿಸಿರುವ ಬಾಲಕರ ಹಾಸ್ಟೆಲ್ ಉದ್ಗಾಟನೆ.3.13 ಕೋಟಿ ರೂ. ವೆಚ್ಚದಲ್ಲಿ ಸಂತೇಮರಹಳ್ಳಿ ಅರ್ಚರಿ ಮತ್ತು ಪಿನ್ನಿಗ್ಸ್ ಕ್ರೀಡಾ ವಸತಿ ಶಲೆಯಲ್ಲಿ ಒಳಾಂಗಣ ಕ್ರೀಡಾಂಗಣ ಮತ್ತು ಮರದ ನೆಲಹಾಸು ಕಾಮಗಾರಿ ಉದ್ಗಾಟನೆ, 1.35 ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಕೈಗಾರಿಕಾ ಕಾಲೇಜು ಹೆಚ್ಚುವರಿ ನೂತನ ಕೊಠಡಿಗಳ ಉದ್ಗಾಟನೆ.


8.39 ಕೋಟಿ ವೆಚ್ಚದಲ್ಲಿ ಅಗರ ಮತ್ತು ಮದ್ದೂರು ನೀರು ಸಂಗ್ರಹ ಜಲಾಶಯಗಳನ್ನು ನಿರ್ಮಿಸಿ ಕರ್ನಾಟಕ ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಸಲಿದಾರೆ.
ಇದೇ ರೀತಿ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ ಉದ್ಗಾಟನೆ ಹಾಗು ಶಂಕುಸ್ಥಾಪನೆಯನ್ನು ಗಣ್ಯರು ನೆರವೇರಿಸಲಿದ್ದಾರೆ. ಕೊಳ್ಳೇಗಾಲ ಕ್ಷೇತ್ರಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಥಮ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅದ್ದೂರಿ ಸ್ವಾಗತ ಕೋರಲಾಗುತ್ತದೆ. ಇದರೊಟ್ಟಿಗೆ ಕ್ಷೇತ್ರದ ಜನರಿಗೆ ವಿವಿಧ ಸವಲತ್ತುಗಳನ್ನು ನೀಡಲಿದ್ದಾರೆ ಎಂದು ಎ.ಆರ್. ಕೃಷ್ಭಮೂರ್ತಿ ತಿಳಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ, ಸಚಿವರಾದÀ ಕೆ.ಎಚ್. ಮುನಿಯಪ್ಪ. ಸತೀಶ್ ಜಾರಕಿಹೋಳಿ, ಚೆಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ಎಂ.ಬಿ. ಪಾಟೀಲ್. ಪ್ರಿಯಾಂಕ ಖರ್ಗೆ, ಜಿಲ್ಲೆಯ ಶಾಸಕರಾದ ಮಂಜುನಾಥ್, ಗಣೇಶ್ ಪ್ರಸಾದ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯೋಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡರಾದ ನಂಜೇಗೌಡ, ಮದ್ದೂರು ಮುಜಿದ್ ಇದ್ದರು.