Home ಜಿಲ್ಲೆ ಮಂಗಳೂರು ಉಡುಪಿ: ಜೆ.ಸಿ.ಬಿ ಆಪರೇಟರ್ ನಾಪತ್ತೆ

ಉಡುಪಿ: ಜೆ.ಸಿ.ಬಿ ಆಪರೇಟರ್ ನಾಪತ್ತೆ

ಉಡುಪಿ-ಕಾಪು ತಾಲೂಕು ನಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ಶಿವರಾಮ ಪೂಜಾರಿ (೪೧) ಎನ್ನುವ ವ್ಯಕ್ತಿಯು ಮೂಲ್ಕಿಯಲ್ಲಿ ಜೆಸಿಬಿ ಆಪರೇಟಿಂಗ್ ಕೆಲಸ ಮಾಡಿಕೊಂಡಿದ್ದು, ಆಗಸ್ಟ್ ೨೩ ರಂದು ಬೆಳಗ್ಗೆ ೮ ಗಂಟೆಯ ಸುಮಾರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
೫ ಅಡಿ ೧ ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪಡುಬಿದ್ರೆ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವ್ಯಕ್ತಿ ನಾಪತ್ತೆ
ಉಡುಪಿ ಸೆಪ್ಟಂಬರ್ ೦೩ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳಾವರ ನಿವಾಸಿ ಸುಧಾಕರ ಶೆಟ್ಟಿ (೪೦) ಎಂಬ ವ್ಯಕ್ತಿಯು ಶಿವಮೊಗ್ಗದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಆಗಾಗ ಮನೆಗೆ ಬಂದು ಹೋಗುತ್ತಿರುತ್ತಾರೆ. ಮೇ ೭ ರಂದು ಬೆಳಗ್ಗೆ ೧೦.೩೦ ರ ಸುಮಾರಿಗೆ ಶಿವಮೊಗ್ಗದಿಂದ ಮನೆಗೆ ಬಂದಿದ್ದು, ಅದೇ ದಿನ ಸಂಜೆ ಶಿವಮೊಗ್ಗಕ್ಕೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರೂ ಕೆಲಸಕ್ಕೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.
೫ ಅಡಿ ೫ ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: ೯೪೮೦೮೦೫೪೬೮, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: ೯೪೮೦೮೦೫೪೩೩ ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: ೦೮೨೦-೨೫೨೬೪೪೪ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.