Home ಜಿಲ್ಲೆ ಮೈಸೂರು ಎಸ್.ಐ.ಆರ್ ಪ್ರಕ್ರಿಯೆ ಪ್ರಗತಿ ಪರಿಶೀಲಿಸಿದ ವಿ. ಅನ್ಬುಕುಮಾರ್

ಎಸ್.ಐ.ಆರ್ ಪ್ರಕ್ರಿಯೆ ಪ್ರಗತಿ ಪರಿಶೀಲಿಸಿದ ವಿ. ಅನ್ಬುಕುಮಾರ್

ಸಂಜೆವಾಣಿ ನ್ಯೂಸ್
ಮೈಸೂರು ಜು.21:-
ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ [ಎಸ್.ಐ.ಆರ್] ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಬಿಎಲ್‍ಒಗಳು ಎಸ್.ಐ.ಆರ್ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಿರ್ವಹಿಸಬೇಕು ಎಂದು ಸೂಚಿಸಿದರು. ಮತದಾರರ ನೋಂದಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡಿ ಪರಿಷ್ಕರಣೆ ಕಾರ್ಯವನ್ನು ಸ್ಥಳದಲ್ಲಿ ಪರಿಶೀಲಿಸಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.

ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿ ಸಿದ್ಧಪಡಿಸುವ ನಿಟ್ಟಿನಲ್ಲಿ ಎಲ್ಲಾ ವಿವರಗಳನ್ನು ಅತ್ಯಂತ ಎಚ್ಚರಿಕೆಯಿಂದ ಪರಿಶೀಲಿಸಬೇಕು. ಯಾವ ಮತಗಟ್ಟೆಗಳಲ್ಲಿ ಪ್ರಗತಿ ಕಡಿಮೆಯಿದೆಯೋ ಅಂತಹ ಪ್ರದೇಶಗಳಿಗೆ ಹೆಚ್ಚಿನ ಗಮನ ನೀಡಿ, ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಪ್ರಗತಿಯನ್ನು ವೇಗಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ಸೂಚನೆ: ಮತದಾರರ ನೋಂದಣಾಧಿಕಾರಿಗಳು ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಬೇಕು. ಅದೇ ರೀತಿ ಬಿಎಲ್‍ಒಗಳು ಪಕ್ಷಗಳಿಂದ ನೇಮಕಗೊಂಡಿರುವ ಬಿಎಲ್‍ಎ-2ಗಳೊಂದಿಗೆ ಸಭೆ ನಡೆಸಿ SIಖ ಕಾರ್ಯದ ಪ್ರಗತಿ ವರದಿ ಹಾಗೂ ಂSಆಆಔ ಅಂದರೆ ಂbseಟಿಣ-ಗೈರು, Shiಜಿಣeಜ-ಸ್ಥಳಾಂತರ, ಆeಚಿಣh-ಮರಣ, ಆuಠಿಟiಛಿಚಿಣe-ಪುನರಾವರ್ತಿತ, ಔಣheಡಿ-ಇತರೆ ಎಂದು ಗುರುತಿಸಿರುವ ಮತದಾರರ ವಿವರಗಳನ್ನು ಪ್ರತಿವಾರ ಸಲ್ಲಿಸುವಂತೆ ಸೂಚಿಸಿದರು.

ಮುಂದಿನ ಹಂತದ ಪರಿಷ್ಕರಣೆ ಕಾರ್ಯವನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಈ ಸಂಬಂಧ ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಲ್ಲಿದ್ದ ಗೊಂದಲಗಳು ಹಾಗೂ ಪ್ರಶ್ನೆಗಳಿಗೆ ಪರಿಹಾರ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಜಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಎಸ್. ಮೈಸೂರು ಮಹಾನಗರಪಾಲಿಕೆ ಆಯುಕ್ತೆ ಎಂ.ಕೆ. ಸವಿತ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಜರಿದ್ದರು.