ಮಂಗಳೂರು-ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸುಲು ವಿ. ಬಂಧಿತ ಆರೋಪಿ.
ಈತ ಧರ್ಮಸ್ಥಳ ಪೊಲೀಸ್ ಠಾಣೆಯ ಕ್ರೈಂ ನಂ. ೧೬೯/೨೦೧೬ (ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೩೭೯ ಮತ್ತು ೨೦೧ರ ಅಡಿಯಲ್ಲಿ) ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ ಆರೋಪಿಯಾಗಿದ್ದನು.
ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ್ ಮತ್ತು ಚರಣ್ ರಾಜ್ ಅವರು ಜೂನ್ ೩೦ ರಂದು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಜುಲೈ ೧ ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


































