Home Uncategorized ಒತ್ತಡ ನಡುವೆ  ಮಹಿಳೆಯರಿಂದ ಅಪ್ರತಿಮ ಸಾಧನೆ

ಒತ್ತಡ ನಡುವೆ  ಮಹಿಳೆಯರಿಂದ ಅಪ್ರತಿಮ ಸಾಧನೆ

 ಸಂಜೆವಾಣಿ ವಾರ್ತೆ

ಹೊಸಪೇಟೆ, ಮಾ.09: ಪ್ರಸ್ತುತ ಸಮಾಜದಲ್ಲಿ ಮಹಿಳೆಯರು ಕುಟುಂಬದ ನಿರ್ವಹಣೆ ಸೇರಿದಂತೆ ಹಲವಾರು ಒತ್ತಡಗಳ ನಡುವೆ ಅಪ್ರತಿಮ ಸಾಧನೆ ಮಾಡಿದ್ದಾರೆ. ಇದು ಮಹಿಳೆಯರಿಂದ ಮಾತ್ರ ಸಾಧ್ಯ ಎಂದು ಅಪರ ಸಿವಿಲ್ ನ್ಯಾಯಾಧೀಶೆ ಚೈತ್ರ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟಿಥಯ ಮಹಿಳಾ ದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಹಿಳೆಯರಿಗೆ ನೀಡುವ ಸ್ಥಾನಮಾನ, ಅವರ ಹಕ್ಕುಗಳ ರಕ್ಷಣೆ ಹಾಗೂ ಗೌರವದ ಆಧಾರದ ಮೇಲೆ ದೇಶದ ಪ್ರಗತಿಯನ್ನು ಪರಿಗಣಿಸಲಾಗುತ್ತದೆ. ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಸಾಕಷ್ಟಿದೆ. ಮಹಿಳೆಯರು ಕೂಡ ಪುರುಷರಷ್ಟೆ ಸಮಬಲರು ಎಂದು ಈಗಾಗಲೇ ಸಾಬೀತುಪಡಿಸಿದ್ದಾರೆ.ಟ

ಮಹಿಳೆಯರ ರಕ್ಷಣೆಗಾಗಿ ಇರುವ

ಹಕ್ಕುಗಳು ಸದ್ಬಳಕೆ ಆಗಲಿ. ನಮ್ಮ ಹಕ್ಕುಗಳಿಂದ ಬೇರೆಯವರ ಹಕ್ಕುಗಳಿಗೆ ಧಕ್ಕೆಯಾಗುವುದು ಬೇಡ. ಯಾವುದೇ ಮಹಿಳೆ ನಿಮ್ಮ ಬಳಿ ಸಹಾಯ ಕೇಳಿಕೊಂಡು ಬಂದರೆ ಅವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಹೆಣ್ಣಿಗೆ ಹೆಣ್ಣೆ ಶತ್ರು ಎಂಬ ಗಾದೆಯನ್ನು ತೊಡೆದುಹಾಕಲು ಪ್ರಯತ್ನಿಸಿ ಎಂದರು.

ಮುಖ್ಯ ಆತಿಥಿಗಳಾಗಿ ಭಾಗವಹಿಸಿದ್ದ 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಶೃತಿ ತೇಲಿ ಮಾತನಾಡಿ, ವಿವಿಧ ಕೇತ್ರಗಳಲ್ಲಿ ಮಹಿಳೆಯರು ಮಾಡಿರುವ ಸಾಧನೆಯನ್ನು ಸ್ಮರಿಸಲು ಹಾಗೂ ಸಾಧಕರನ್ನು ಗುರುತಿಸಿ, ಗೌರವಿಸಲು ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಮಹಿಳೆಯರು ಪ್ರವೇಶಿಸದ ಕ್ಷೇತ್ರವೇ ಇಲ್ಲ. ಅದಕ್ಕೆ ಸ್ಪಷ್ಟ ನಿದರ್ಶನ ಇಲ್ಲಿ ಭಾಗವಹಿಸಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಜಿಲ್ಲೆಯಲ್ಲಿರುವ ಮಹಿಳಾ ಅಧಿಕಾರಿಗಳು ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು.