
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಏ.29: ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಕಠಿಣ ಪರಿಶ್ರಮದಿಂದ ವಿಧ್ಯಾಭ್ಯಾಸ ಮಾಡಿ ತಮ್ಮ ಗುರಿ ಸಾಧನೆ ಮಾಡಬೇಕು. ಓದುವ ವಯಸ್ಸಲ್ಲಿ ಬೇರೆ ಕಡೆ ಆಕರ್ಷಿತರಾಗದೇ ಓದುವ ಕಡೆಗೆ ಮಾತ್ರ ನಿಗಾವಹಿಸಬೇಕು ಎಂದು ಸಮಾಜ ಸೇವಕ ಹಾಗೂ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಆರ್.ಟಿ.ಓ ಮಲ್ಲಿಕಾರ್ಜುನ್ ಹೇಳಿದರು.
ಅವರು ಪಟ್ಟಣದ ಸುಲೋಚನಮ್ಮ ರಾಮದಾಸ್ ಸಭಾಂಗಣದಲ್ಲಿ ಪಟ್ಟಣದ ಸ್ಕಾಲರ್ಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿ ಮಾತನಾಡಿದರು. ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಪಟ್ಟಣದ ಸ್ಕಾಲರ್ಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 151 ವಿದ್ಯಾರ್ಥಿಗಳ ಪೈಕಿ 65 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್’ನಲ್ಲಿ , 86 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.100 ರಷ್ಟು ಫಲಿತಾಂಶವನ್ನು ತಂದುಕೊಡುವ ಜೊತೆಗೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ತಾಲೂಕಿನ ಟಾಪರ್ ಗಳಾಗಿ ಹೊರಹೊಮ್ಮುವ ಮೂಲಕ ಕಾಲೇಜಿನ ಕೀರ್ತಿ ಪತಾಕೆಯನ್ನು ನಾಡಿನಾದ್ಯಂತ ಬೆಳಗಿದ್ದಾರೆ ಎಂದು ಅಭಿಮಾನದಿಂದ ತಿಳಿಸಿದ ಮಲ್ಲಿಕಾರ್ಜುನ ವಿದ್ಯೆಯ ಜ್ಞಾನದ ಬೆಳಕಿನ ಶಕ್ತಿಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸೊತ್ತಲ್ಲ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳು ಒಡ್ಡುವ ಸ್ಪರ್ಧೆಯನ್ನು ಎದುರಿಸಿ ಸರ್ವ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಸ್ಕಾಲರ್ಸ್ ಪದವಿ ಪೂರ್ವ ಕಾಲೇಜು , ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕಿನ ಸಂಸ್ಕಾರ ನೀಡುವ ಜೊತೆಗೆ ಶಿಸ್ತು ಸಂಯಮ ವಿನಯವಂತಿಕೆಯನ್ನು ಕಲಿಸಿ ವಿದ್ಯಾರ್ಥಿಗಳನ್ನು ಭವಿಷ್ಯದ ನಾಯಕರನ್ನಾಗಿ ಸಜ್ಜುಗೊಳಿಸುವ ಕೆಲಸವನ್ನು ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಉಪನ್ಯಾಸಕರು ಬದ್ಧತೆಯಿಂದ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸ್ಕಾಲರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡು ನುರಿತ ಉಪನ್ಯಾಸಕ ವೃಂದದಿಂದ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಿ ಅತ್ಯುನ್ನತ ಶ್ರೇಣಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವಂತೆ ಸಜ್ಜುಗೊಳಿಸಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಮ್ಮ ಕಾಲೇಜು ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶವನ್ನು ಪಡೆಯುವ ಜೊತೆಗೆ ಕಾಲೇಜು ತಾಲೂಕಿನಲ್ಲಿಯೇ ಪ್ರಥಮ ಸ್ಥಾನವನ್ನುಗಳಿಸಿ ತನ್ನ ಜೈತ್ರ ಯಾತ್ರೆಯನ್ನು ಮುಂದುವರಿಸಿದೆ ಈ ಫಲಿತಾಂಶ ಬರಲು ಕಾರಣರಾದ ವಿದ್ಯಾರ್ಥಿಗಳು ಪೆÇೀಷಕರು ಹಾಗೂ ಉಪನ್ಯಾಸಕ ವೃಂದವನ್ನು ಅಭಿನಂದಿಸುವುದಾಗಿ ತಿಳಿಸಿದರು. ಸ್ಕಾಲರ್ಸ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿದ್ಯಾ ಮಂಜುನಾಥ್, ಉಪಾಧ್ಯಕ್ಷ ರಾಘವೇಂದ್ರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ, ರೈತ ಮುಖಂಡ ಬಿ.ಬಾಚಹಳ್ಳಿ ಪ್ರಸನ್ನಕುಮಾರ್, ಸೇರಿದಂತೆ ವಿದ್ಯಾರ್ಥಿಗಳು,ಪೆÇೀಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

























