
ಕೈವ್,ಆ.14- ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಕೊನೆಗೊಳಿಸುವ ಕುರಿತು ಅಲಸ್ಕಾದಲ್ಲಿ ನಾಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ವ್ಲಾಡಿಮಿರ್ ಪುಟಿನ್ ನಡುವೆ ಮಾತುಕತೆ ನಡೆಯುತ್ತಿರುವುದು ಕುತೂಹಲ ಕೆರಳಿಸಿದೆ.
ಈ ನಡುವೆ ಯುರೋಪಿಯನ್ ಒಕ್ಕೂಟದ ನಾಯಕರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಿದ್ದು ಕದನ ವಿರಾಮ ಜಾರಿಯ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಕದನ ವಿರಾಮ ಜಾರಿಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಶಾಂತಿ ನೆಲೆಸಲು ಅಗತ್ಯ ಕ್ರಮ ಕೈಗೊಳ್ಳುವ ಅಗತ್ಯ ಮತ್ತು ಅನಿವಾರ್ಯತೆ ಇದೆ ಎಂದು ಯುರೋಪಿಯನ್ ಒಕ್ಕೂಟದ ನಾಯಕರು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮನವಿ ಮಾಡಿದ್ದಾರೆ
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರೊಂದಿಗೆ ಇಂಗ್ಲೆಂಡ್ ಫ್ರಾನ್ಸ್, ಜರ್ಮನಿ, ಇಟಲಿ, ಫಿನ್ಲ್ಯಾಂಡ್ ಮತ್ತು ಪೆÇ?ಲೆಂಡ್ ನಾಯಕರು ಮತ್ತು ಯುರೋಪಿಯನ್ ಒಕ್ಕೂಟದ ಮುಖ್ಯಸ್ಥೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ನ್ಯಾಟೋ ಮುಖ್ಯಸ್ಥ ಮಾರ್ಕ್ ರುಟ್ಟೆ ಅವರೂ ಕೂಡ ಮಾತುಕತೆ ನಡೆಸುವ ಮೂಲಕ ಕದನ ವಿರಾಮ ಜಾರಿ ಮಾಡುವ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ
ಅಲಾಸ್ಕಾದಲ್ಲಿ ತರಾತುರಿಯಲ್ಲಿ ಆಯೋಜಿಸಲಾದ ಶೃಂಗಸಭೆಯಿಂದ ಯುರೋಪಿಯನ್ನರನ್ನು ಬದಿಗಿಡಲಾಗಿದೆ ಎನ್ನುವ ಆರೋಪದ ನಡುವೆ ಉಕ್ರೇನ್‍ನ ಹಿತಾಸಕ್ತಿಗಳು ಮತ್ತು ಖಂಡದ ಭದ್ರತೆ ಖಚಿತ ಪಡಿಸಿಕೊಳ್ಳಲು ಡೊನಾಲ್ಡ್ ಟ್ರಂಪ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ
ರಷ್ಯಾ ಮತ್ತು ಉಕ್ರೇನ್ ನಡುವೆ ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವ ಕುರಿಸು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ
ಯುರೋಪಿಯನ್ ನಾಯಕರು ತಮ್ಮ ಹೇಳಿಕೆಗಳಲ್ಲಿ ಉಕ್ರೇನ್ ವಿಷಯದಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಯುರೋಪಿಯನ್ ನಾಯಕರ ಸಹಮತಿ ಪಡೆಯುವು ಅಗತ್ಯವಿದೆ ಎಂದು ತಿಳಿಸಿದ್ದಾರೆ
ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಮಾತನಾಡಿ “ಮುಂದಿನ ಸಭೆಗಳು ನಡೆದ ತಕ್ಷಣ ಉಕ್ರೇನ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆ ಇಡಬೇಕು ಎಂದಿದ್ದಾರೆ
ಫ್ರಾನ್ಸ್‍ನ ಎಮ್ಯಾನುಯೆಲ್ ಮ್ಯಾಕ್ರನ್ ಮಾತನಾಡಿ ರಷ್ಯಾದ ಕಡೆಯವರು ಯಾವುದೇ ರಿಯಾಯಿತಿಗಳನ್ನು ನೀಡಲು ನಿರಾಕರಿಸಿದರೆ ಅಮೇರಿಕಾ ಒತ್ತಡಕ್ಕೆ ಮಣಿಯಬಾದರು. ರಷ್ಯಾ ಮತ್ತು ಉಕ್ರೇನ್ ನಡುವೆ ಕದನ ವಿರಾಮ ಜಾರಿ ಮಾಡಲು ಮುಂದಾಗಬೇಕು ಎಂದು ತಿಳಿಸಿದ್ದಾರೆ