Home ಜಿಲ್ಲೆ ಮೈಸೂರು ಕನ್ನಡವನ್ನು ಕಟ್ಟಿ ಬೆಳೆಸುವ ಕೆಲಸವಾಗಬೇಕು: ಮಂಜುನಾಥ್

ಕನ್ನಡವನ್ನು ಕಟ್ಟಿ ಬೆಳೆಸುವ ಕೆಲಸವಾಗಬೇಕು: ಮಂಜುನಾಥ್

ಸಂಜೆವಾಣಿ ವಾರ್ತೆ
ಹನೂರು ನ 23 :-
ಕನ್ನಡ ನಾಡು, ನುಡಿಯ ಬಗ್ಗೆ ಪ್ರತಿಯೊಬ್ಬರೂ ಪ್ರೀತಿ ಹೊಂದುವುದರ ಮೂಲಕ ಕನ್ನಡವನ್ನು ಕಟ್ಟಿ ಬೆಳೆಸುವ ಕೆಲಸವಾಗ ಬೇಕು.ಕನ್ನಡ ಹೃದಯದ ಭಾಷೆಯಾಗಿರಬೇಕು. ಅದನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು


ಪ್ರತಿಯೊಬ್ಬರೂ ನಾಡು, ನುಡಿ ಹಾಗೂ ಜಲದ ಬಗ್ಗೆ ಅಭಿಮಾನ ಹೊಂದುವುದರ ಮೂಲಕ ಕನ್ನಡವನ್ನು ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಕನ್ನಡವನ್ನು ಪ್ರೀತಿಸಬೇಕು ಎಂದು ಅವರು ಹೇಳಿದರು.
ಹನೂರಿನಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಮೆಚ್ಚುಗೆಯ ಸಂಗತಿ. ಕನ್ನಡದ ಕಾರ್ಯಕ್ರಮಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ವರ್ಷಪೂರ್ತಿ ನಡೆಯಬೇಕು. ಮಕ್ಕಳಲ್ಲಿ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವ ಕೆಲಸವಾಗಬೇಕು ಎಂದು ಅವರು ತಿಳಿಸಿದರು.


ಹನೂರು ಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ವಿದ್ಯುತ್, ರಸ್ತೆ, ಕುಡಿಯುವ ನೀರು ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಗಮನ ಹರಿಸಲಾಗಿದೆ. ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸಲು ಹೊಸ ಪವರ್ ಸ್ಟೇಷನ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಜೊತೆಗೆ ರೈತರಿಗೆ ಅನುಕೂಲವಾಗುವಂತೆ ನೀರಾವರಿ ಯೋಜನೆಯೊಂದನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಆರ್. ನರೇಂದ್ರ, ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಹೇಶ್ ಕುಮಾರ್, ಪೆÇಲೀಸ್ ಇಲಾಖೆ ಅಧಿಕಾರಿ ಮಹಾನಂದ, ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆನಂದ್, ಪಿ.ಎ.ಸಿ.ಸಿ ನಿರ್ದೇಶಕ ಮಂಜೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.