ಕುಡಿಯುವ ನೀರಿಗೆ ಹಾಹಾಕಾರ: ಸಿಗುವ ನೀರಿಗೂ ಕಿತ್ತಾಟ

ಸಂಜೆವಾಣಿ ವಾರ್ತೆ
ಹನೂರು: ಫೆ.16:-
ಕುಡಿಯುವ ನೀರಿಗಾಗಿ ಜನರು ಕಿತ್ತಾಡುತ್ತಿದ್ದರು ಸಮರ್ಪಕ ನೀರು ಒದಗಿಸುವಲ್ಲಿ ಗ್ರಾಮ ಪಂಚಾಯಿತ್ ಆಡಳಿತ ಅಧಿಕಾರಿ ಬೇಜವಾಬ್ದಾರಿ ತೋರುತ್ತಿದೆ ಎಂಬುದಕ್ಕೆ ಭೈರನತ್ತರ ಗ್ರಾಮದಲ್ಲಿ ಸೃಷ್ಟಿಯಾಗಿರುವ ನೀರಿನ ಅಭಾವಕ್ಕೆ ಹಿಡಿದ ಕನ್ನಡಿಯಾಗಿದೆ.

ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ನೀರಿನ ಸಮಸ್ಯೆ ಉದ್ಭವವಾಗಿ ತೊಂಬೆಯಲ್ಲಿ ಸಿಗುವ ಅಲ್ಪ ಸ್ವಲ್ಪ ನೀರಿಗಾಗಿ ಜನರು ಕಿತ್ತಾಡಿ ಗಲಾಟೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭೈರನತ್ತ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗಿ ಎರಡು ತಿಂಗಳೇ ಕಳೆದಿದ್ದರೂ ನೀರಿನ ಸಮಸ್ಯೆ ಬಗ್ಗೆ ಹರಿಸುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ ಈ ಬಗ್ಗೆ ಪಿ.ಡಿ.ಒ ರಾಮು ಅವರ ಗಮನಕ್ಕೆ ತಿಳಿಸಿದ್ದರೂ ಸಹ ನೀರು ಪೂರೈಸಲು ಕ್ರಮ ಕೈಗೊಳ್ಳಲು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ಬೇಸಿಗೆ ಶುರುವಾಗುತ್ತಿದ್ದಂತೆ ನೀರಿನ ಸಮಸ್ಯೆ ಆಗಬಾರದೆಂದು ಜಿಲ್ಲಾಡಳಿತ ಶಾಸಕರು ಅಗತ್ಯ ಕ್ರಮಗಳನ್ನು ಕೈಗೊಂಡು ಸಮರ್ಪಕ ನೀರು ಪೂರೈಸಬೇಕು ಎಂಬ ಸೂಚನೆ ನೀಡಿದ್ದಾರೆ ಆದರೂ ಇಲ್ಲಿನ ಮಣಗಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೇಜವಾಬ್ದಾರಿತನಕ್ಕೆ ನೀರಿನ ಹಾಹಾಕಾರ ಉಂಟಾಗಿದೆ ಈ ಬಗ್ಗೆ ಸಂಬಂಧಪಟ್ಟ ಮೇಲಾಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಮುಂದಾಗ ಬೇಕಿದೆ.