Home ಜಿಲ್ಲೆ ಮಂಗಳೂರು ಕೊಲೆ ಯತ್ನ ಪ್ರಕರಣದ ಆರೋಪಿಗಳಿಗೆ ೭ ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಕೊಲೆ ಯತ್ನ ಪ್ರಕರಣದ ಆರೋಪಿಗಳಿಗೆ ೭ ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಬಂಟ್ವಾಳ-ಕೊಲೆ ಯತ್ನ ಪ್ರಕರಣದ ನಾಲ್ವರು ಆರೋಪಿಗಳಿಗೆ ೭ ವರ್ಷ ಜೈಲು ಶಿಕ್ಷೆ ಮತ್ತು ೮೮,೦೦೦ ದಂಡ ವಿಧಿಸಿ ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿರುತ್ತದೆ.
ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ (ಮುನ್ನಿ) ಹಾಗೂ ಮಹಮ್ಮದ್ ಸವಾದ ಶಿಕ್ಷೆಗೊಳಗಾದ ಆರೋಪಿಗಳು.
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಫರಂಗಿಪೇಟೆ ಎಂಬಲ್ಲಿ, ೨೦೨೦ರ ಅ. ೨೮ ರ ಸಂಜೆ, ಸ್ಟುಡಿಯೋದ ಮಾಲಿಕನಾದ ದಿನೇಶ್ ಎಂಬವರು ತನ್ನ ಸ್ಟುಡಿಯೋದಲ್ಲಿದ್ದಾಗ ಪೂರ್ವದ್ವೇಶದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಸ್ಟುಡಿಯೋಗೆ ಬಂದು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುತ್ತಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: ೧೦೩/೨೦೨೦ ಕಲಂ: ಕಲಂ: ೩೦೭.೩೨೪.೩೨೬.೫೦೪.೫೦೬ ಜೊ ೩೪ ಭಾ.ದಂ.ಸಂ ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದ ತನಿಖೆ ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಮ್ ಎಸ್ ಅವರು ಆರೋಪಿಗಳನ್ನು ದಸ್ತಗಿರಿ ಮಾಡಿ ಸದ್ರಿ ಆರೋಪಿಗಳ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ.
ಇದೀಗ ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಗದೀಶ್ ವಿ.ಎನ್ ರವರು ಬುಧವಾರ ನಾಲ್ವರು ಆರೋಪಿಗಳಿಗೂ ೭ ವರ್ಷ ಜೈಲು ಶಿಕ್ಷೆ ಮತ್ತು ೮೮,೦೦೦ ದಂಡ ವಿಧಿಸಿರುತ್ತದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಜ್ಯೋತಿ ನಾಯಕ್ ರವರು ವಾದಿಸಿರುತ್ತಾರೆ.