
ಉಡುಪಿ-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ಮೂಕಾಂಬಿಕೆಯ ದರ್ಶನ ಪಡೆದರು.
ದೇವಾಲಯಕ್ಕೆ ಆಗಮಿಸಿದ ಸಚಿವರು ಪೂಜೆ ಸಲ್ಲಿಸಿ, ದೇವಸ್ಥಾನದ ಪರಿಸರವನ್ನು ವೀಕ್ಷಿಸಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ನಿರ್ಮಲಾ ಸೀತಾರಾಮನ್ ಅವರಿಗೆ ಸನ್ಮಾನಿಸಲಾಯಿತು. ಸಚಿವೆ ಭೇಟಿ ವೇಳೆ ನೆರೆದಿದ್ದ ಅರ್ಚಕ ವರ್ಗ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.






















