Home ಜಿಲ್ಲೆ ಮಂಗಳೂರು ಗೃಹಲಕ್ಷ್ಮಿ: ಮೃತರ ಖಾತೆಗೆ ಜಮೆಯಾದ ಹಣವನ್ನು ಹಿಂಪಡೆಯಲು ತ್ವರಿತ ಕ್ರಮವಹಿಸಿ- ಭರತ್ ಮುಂಡೋಡಿ

ಗೃಹಲಕ್ಷ್ಮಿ: ಮೃತರ ಖಾತೆಗೆ ಜಮೆಯಾದ ಹಣವನ್ನು ಹಿಂಪಡೆಯಲು ತ್ವರಿತ ಕ್ರಮವಹಿಸಿ- ಭರತ್ ಮುಂಡೋಡಿ

ಮAಗಳೂರು- ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳಿಗೆ ಬಿಡುಗಡೆಯಾಗಿರುವ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮರಣ ಹೊಂದಿದವರ ಮಾಹಿತಿಯು ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಲಭ್ಯವಿರುವುದರಿಂದ, ಸಂಬAಧಪಟ್ಟ ಕಾರ್ಯನಿರ್ವಾಹಕ ಅಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಮಾಹಿತಿಯನ್ನು ಪರಿಶೀಲಿಸಿ, ತಾಲೂಕು ಮಟ್ಟದ ಸಭೆಗೆ ಸಲ್ಲಿಸಬೇಕು. ಗೃಹಲಕ್ಷ್ಮಿ ಯೋಜನೆಯಡಿ ದುರುಪಯೋಗವಾಗಿರುವ ಹಣವನ್ನು ಮರುಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ವಿಳಂಬವಿಲ್ಲದೆ ಮಾಹಿತಿ ಸಂಗ್ರಹಣೆ ಹಾಗೂ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಪಡಿತರ ಚೀಟಿಗೆ ಸಂಬAಧಿಸಿದAತೆ ಇ-ಕೆವೈಸಿ ಮಾಡಬೇಕಾಗಿದ್ದು, ಪ್ರಸ್ತುತ ೮೯% ರಷ್ಟು ಇ-ಕೆವೈಸಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ವಿಶೇಷಚೇತನರು ಬಸ್ ಹತ್ತಿದಾಗ ಸೀಟುಗಳನ್ನು ನೀಡುತ್ತಿಲ್ಲವೆಂದು ದೂರುಗಳು ಸ್ವೀಕೃತಗೊಂಡಿರುವ ಬಗ್ಗೆ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿದ್ದು, ವಿಶೇಷ ಚೇತನರಿಗೆ ಮೀಸಲಿರಿಸಿದ ಜಾಗಕ್ಕೆ ಸ್ಟಿಕ್ಕರನ್ನು ಅಂಟಿಸಿ ಬಸ್ಸಿಗೆ ಹತ್ತುವ ವಿಶೇಷ ಚೇತನರಿಗೆ ಮೀಸಲಿರಿಸಿದ ಜಾಗವನ್ನು ಬಿಟ್ಟುಕೊಡುವಂತೆ ಚಾಲಕ/ನಿರ್ವಾಹಕರಿಗೆ ತಿಳುವಳಿಕೆ ನೀಡಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಕಿನ್ನಿಗೋಳಿಯಲ್ಲಿ ಲೈನ್ ಮ್ಯಾನ್‍ಗಳ ಕೊರತೆ ಇದ್ದು, ಈಗಾಗಲೇ ಇರುವ ಇಬ್ಬರು ಲೈನ್ ಮ್ಯಾನ್‍ಗಳು ಬೇರೆ ಕಡೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಲ್ಕಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷಾ್ಠನ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದಾಗ, ಲೈನ್‍ಮ್ಯಾನ್‍ಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕಿನ್ನಿಗೋಳಿ ಶಾಖೆಗೆ ಪ್ರಥಮ ಆದ್ಯತೆ ನೀಡುವಂತೆ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಜೊತೆಗೆ ಪವರ್ ಮ್ಯಾನ್‍ಗಳ ಕೊರತೆಯಿಂದ ಉಂಟಾಗಿರುವ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ನಾಲ್ವರು ಹೆಚ್ಚುವರಿ ಗ್ಯಾಂಗ್ ಮ್ಯಾನ್‍ಗಳನ್ನು ಕಿನ್ನಿಗೋಳಿ ಶಾಖೆಗೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಯುವನಿಧಿ ಯೋಜನೆಯ ಕುರಿತು ಅರ್ಹ ಯುವಜನರಿಗೆ ಸಮರ್ಪಕ ಮಾಹಿತಿ ತಲುಪಿಸುವ ಉದ್ದೇಶದಿಂದ ಜಿಲ್ಲೆಯ ಕಾಲೇಜುಗಳ ನೋಟಿಸ್ ಬರ‍್ಡ್‍ಗಳಲ್ಲಿ ಯೋಜನೆಗೆ ಸಂಬAಧಿಸಿದ ಮಾಹಿತಿಯನ್ನು ಪ್ರಕಟಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಸಮಿತಿ ಉಪಾಧ್ಯರಾದ ಸುರೇಖಾ ಚಂದ್ರಹಾಸ್, ಶೇಖರ್ ಕುಕ್ಕೆಡಿ, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೈಮೆಂಟ್ ಕುಟಿನ್ಹ, ಜಯಂತಿ ಬಿಎ, ಪಿಎಸ್ ಗಂಗಾಧರ್, ಉಮಾನಾಥ್ ಶೆಟ್ಟಿ, ಆಲಿಸ್ಟನ್ ಕ್ಲೈವ್ ಡಿ ಕುನ್ಹ, ಎಸ್.ರಫೀಕ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿಭಾಗೀಯ ಮಟ್ಟದ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.