
ಸಂಜೆವಾಣಿ ನ್ಯೂಸ್
ಮೈಸೂರು, ಆ.26:- ನಗರದಲ್ಲಿ ಅಕ್ರಮ ಗೋ ರಫ್ತು ಮತ್ತು ಗೋ ಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲು ಯತ್ನಿಸಿದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೆÇಲೀಸರು ವಶಕ್ಕೆ ಪಡೆದರು.
ಸಾಮಾಜಿಕ ಜಾಣತಾಲದಲ್ಲಿ ವಾಹಿದ್ ಎಂಬಾತ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಗೆ ತಾಕತ್ತಿದ್ದರೆ ಮೈಸೂರಿಗೆ ಬಾ, ನಿನ್ನ ಮುಂದೆಯೇ ಗೋ ಹತ್ಯೆ ಮಾಡುತ್ತೇನೆ ಎಂದು ಹಾಕಿದ್ದ ಸವಾಲು ಸ್ವೀಕರಿಸಿ ಮೈಸೂರಿಗೆ ಬಂದ ಪುನೀತ್ ಕೆರೆಹಳ್ಳಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಜಮಾಯಿಸಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರತಿ ಬೆಳಗಿ ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಪ್ರತಿಭಟನೆ ನಡೆಸಿ ಗೋ ಹತ್ಯೆ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲರೂ ಗುಂಪಾಗಿ ನಿಂತು, ಯಾರೇ ಬರಲಿ ಒಗ್ಗಟ್ಟಿರಲಿ ಎಂದು ಘೋಷಣೆ ಕೂಗಿದರು. ನಾವು ಹಿಂದುತ್ವಕ್ಕಾಗಿ ಸಾಯಲು ಸಿದ್ಧ, ಬಂಧನಕ್ಕೆ ಹೆದರುವುದಿಲ್ಲ ಎಂದರು. ಈ ವೇಳೆ ಪೆÇಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಲು ಮುಂದಾದರು. ಹಿಂದುತ್ವ ಕಾರ್ಯಕರ್ತರು ಪುನೀತ್ ಕೆರೆಹಳ್ಳಿಯವರನ್ನು ಸುತ್ತುವರಿದು ಬಂಧಿಸಲು ಬಿಡಲಿಲ್ಲ. ಸ್ಥಳದಲ್ಲೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಪೆÇಲೀಸರು ಒಬ್ಬೊಬ್ಬರನ್ನೇ ಎಳೆದೊಯ್ದರು, ಈ ವೇಳೆ ನೂಕಾಟ ತಳ್ಳಾಟ ನಡೆಯಿತು.
ನಗರದ ವಿವಿಧ ಪೆÇಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾನೂನಿನ ಭಯವಿಲ್ಲದೆ ಸಮಾಜಘಾತಕ ಶಕ್ತಿಗಳು ವರ್ತಿಸುತ್ತಿದ್ದು, ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ. ಮಂಡಿ ಮೊಹಲ್ಲಾ, ಉದಯಗಿರಿ, ಎನ್.ಆರ್.ಮೊಹಲ್ಲಾ ಹಾಗೂ ಶಾಂತಿನಗರ ವ್ಯಾಪ್ತಿಗಳಲ್ಲಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸಿ ತಂದು ಅಕ್ರಮ ಕಸಾಯಿಖಾನೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕವಾಗಿ ಮಾಂಸ ಪ್ರದರ್ಶಿಸಿ ಕೋಮು ಉದ್ವಿಗ್ನತೆ ಸೃಷ್ಟಿಸಲು ಯತ್ನಿಸಲಾಗುತ್ತಿದ್ದು, ಮಾಹಿತಿ ನೀಡುವ ಗೋರಕ್ಷಕರಿಗೆ ಬಹಿರಂಗವಾಗಿಯೇ ಬೆದರಿಕೆ ಕರೆಗಳನ್ನು ಹಾಕಲಾಗುತ್ತಿದೆ ಎಂದು ಕಿಡಿ ಕಾರಿದರು.
ಸೂಕ್ಷ್ಮ ಪ್ರದೇಶಗಳ ಅಕ್ರಮ ಕಸಾಯಿಖಾನೆಗಳ ಮೇಲೆ ತಕ್ಷಣವೇ ದಾಳಿ ನಡೆಸಿ ಜಾಗಗಳನ್ನು ಜಪ್ತಿ ಮಾಡಬೇಕು. ಬೆದರಿಕೆ ಒಡ್ಡುತ್ತಿರುವ ಕಿಡಿಗೇಡಿಗಳ ವಿರುದ್ಧ ಜಾಮೀನು ರಹಿತ ಸೆಕ್ಷನ್‍ಗಳು ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು. ನಗರದ ಪ್ರವೇಶ ದ್ವಾರಗಳಲ್ಲಿ ಕಟ್ಟುನಿಟ್ಟಿನ ನಾಕಾಬಂದಿ ಹಾಕಿ ಅಕ್ರಮ ಜಾನುವಾರು ಸಾಗಣೆ ವಾಹನಗಳನ್ನು ಜಪ್ತಿ ಮಾಡಬೇಕು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪೆÇಲೀಸ್ ಪಹರೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಬಳಿಕ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಡಿಸಿಪಿಗಳಾದ ಸುಂದರ್ ರಾಜ್, ಡಾ.ಹರ್ಷ ಪ್ರಿಯಂವದ, ದೇವರಾಜ ಪೆÇಲೀಸ್ ಠಾಣೆಯ ರಘು, ಶಿವಶಂಕರ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿತ್ತು.
ತನ್ವೀರ್‍ಸೇಠ್ ಬೆಂಬಲ: ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ಕೆರೆಹಳ್ಳಿ, ಮೈಸೂರಿನ ಉದಯಗಿರಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅತ್ಯಧಿಕ ಪ್ರಮಾಣದಲ್ಲಿ ಗೋ ರಫ್ತು ಮತ್ತು ಗೋ ಹತ್ಯೆ ನಡೆಯುತ್ತಿದೆ. ಸ್ಥಳೀಯ ಶಾಸಕ ತನ್ವೀರ್ ಸೇಠ್ ಅವರ ನೇರ ಬೆಂಬಲ ಮತ್ತು ರಕ್ಷಣೆಯಿಂದಲೇ ಈ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ರಾಜ್ಯದಲ್ಲಿ ಗೋ ಹತ್ಯೆ ತಡೆಗೆ ಸ್ಪಷ್ಟ ಕಾನೂನು ಮತ್ತು ಆದೇಶಗಳಿದ್ದರೂ ಸ್ಥಳೀಯ ಆಡಳಿತ ಹಾಗೂ ಪೆÇಲೀಸರು ಇದನ್ನು ತಡೆಯಲು ಯಾಕೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪೆÇಲೀಸ್ ಇಲಾಖೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾದರೆ, ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


































