
ಮಂಗಳೂರು- ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳ ಅನು??ಠನವನ್ನು ಸಮರ್ಪಕವಾಗಿ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸಲು ವಿಳಂಬ ಮಾಡಬಾರದು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದ್ದಾರೆ.
ಅವರು ಬುಧವಾರ ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಫಲಾನುಭವಿಗಳಿಗೆ ಸೌಲಭ್ಯಗಳನ್ನು ನಿಗದಿತ ಸಮಯದಲ್ಲಿಯೇ ತಲುಪಿಸಬೇಕು. ಯೋಜನೆಗಳ ಸದುಪಯೋಗವನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.
ತಾಲೂಕು ವ್ಯಾಪ್ತಿಗೆ ಒಳಪಡುವ ಜನರಿಗೆ ಯೋಜನೆಗಳ ಸೌಲಭ್ಯ ದೊರಕುತ್ತಿದೆಯೇ ಎಂಬ ಮಾಹಿತಿ ಪಡೆದು, ಸೌಲಭ್ಯಗಳು ಸಿಗದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪೈಕಿ ಆಗಸ್ಟ್ ೧೬ ರಿಂದ ಸೆಪ್ಟೆಂಬರ್ ೮ ರವರೆಗೆ ಒಟ್ಟು ೧೮೪ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಒಟ್ಟಾರೆಯಾಗಿ ೩,೭೯,೪೫೨ ಫಲಾನುಭವಿಗಳು ಯೋಜನೆಗೆ ನೋಂದಾಯಿಸಿಕೊಂಡಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ “ಅನ್ನ ಭಾಗ್ಯ ಯೋಜನೆಯ ಬ್ಯಾನರ್ಗಳನ್ನು ಸರಬರಾಜು ಮಾಡಬೇಕು. ಎಲ್ಲಾ ಕಡೆಗಳಲ್ಲಿ ಬ್ಯಾನರ್ಗಳನ್ನು ಅಳವಡಿಸಿರುವುದಿಲ್ಲ ಎಂದು ಮುಲ್ಕಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನು??ಠನ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದಾಗ, ಸರ್ಕಾರದಿಂದ ಬ್ಯಾನರ್ಗಳನ್ನು ನೀಡಲಾದ ಬಗ್ಗೆ ಪರಿಶೀಲನೆ ನಡೆಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಿಗೆ ಸಭಾಧ್ಯಕ್ಷರು ಸೂಚಿಸಿದರು.
ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಮಾಡುವುದರಿಂದ ಯುವಜನತೆಯ ಮುಂದಿನ ಭವಿಷ್ಯಕ್ಕೆ ಅನುಕೂಲವಾಗುತ್ತದೆ. ಹಾಗೆಯೇ ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಉದ್ಯೋಗ ಮೇಳ ಮಾಡಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.