1970ರ ದಶಕದಲ್ಲಿ ಪ್ರಕಟವಾಗ ತಮಿಳಿನ ಚಿನ್ನಪ್ಪ ಭಾರತಿ ಅವರ ‘ಪವಳಾಯಿ’ ಕಾದಂಬರಿ, ಕೆಲ ವರ್ಷಗಳ ಹಿಂದೆ ಕನ್ನಡ ಭಾಷೆಗೂ ಅನುವಾದವಾಗಿ ಬಿಡುಗಡೆಯಾಗಿತ್ತು. ಇದೀಗ ಈ ‘ಪವಳಾಯಿ’ ಕಾದಂಬರಿ ‘ಸುಳಿ’ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವಾಗಿಯೂ ತೆರೆಮೇಲೆ ಬರುತ್ತಿದೆ.
ಕನ್ನಡದ ಮಹಿಳಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ರಶ್ಮಿ ಎಸ್. (ಸಾಯಿ ರಶ್ಮಿ) ‘ಸುಳಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಸಹಸ್ರಕೋಟಿ ಮೂವೀ ಎಂಟರ್‌ಟೈನ್ಮೆಂಟ್’ ಬ್ಯಾನರಿನಲ್ಲಿ ಬೆಟ್ಟಸ್ವಾಮಿ ಗೌಡ ‘ಸುಳಿ’ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಯುವನಟ ಸನತ್, ಚೈತ್ರಾ ಸಾಕೇಲ್, ಸಂಜನಾ ನಾಯ್ಡು, ಶಿವಕುಮಾರ್ ಆರಾಧ್ಯ, ಸೌಭಾಗ್ಯ, ಸಿದ್ಧು ಮಂಡ್ಯ, ಶಂಕರ ನಾರಾಯಣ, ಬೆಟ್ಟಸ್ವಾಮಿ ಗೌಡ, ಕಾವ್ಯಾ, ಹರಿಹರನ್ ಮತ್ತಿತರರು ‘ಸುಳಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಹಿರಿಯ ಲೇಖಕಿ, ಹೋರಾಟಗಾತಿ ಬಿ. ಟಿ. ಲಲಿತಾ ನಾಯಕ್, ಹಿರಿಯ ನಟಿ ಭವ್ಯಾ, ನಟರಾದ ಸುಚೇಂದ್ರ ಪ್ರಸಾದ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ‘ಸುಳಿ’ ಸಿನಿಮಾದ ಟ್ರೈಲರ್ ಮತ್ತು ಹಾಡುಗಳು ಬಿಡುಗಡೆಯಾಯಿತು.
ಇನ್ನು ‘ಸುಳಿ’ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಬಳಿಕ ಮಾತನಾಡಿದ ಇದೊಂದು ಸಾಮಾಜಿಕ ಕಥಾಹಂದರದ ಸಿನಿಮಾ. 1980ರ ಕಾಲಘಟ್ಟದಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ. ‘ಸಾಕ್ಷಾತ್ಕಾರ’ ಸಿನಿಮಾದ ಘೋಷಣೆಯೊಂದಿಗೆ ಸಿನಿಮಾ ಶುರುವಾಗುತ್ತದೆ. ‘ಸಾಕ್ಷಾತ್ಕಾರ’ ಸಿನಿಮಾದಲ್ಲಿ ಅಣ್ಣಾವ್ರ ಪಾತ್ರದ ಮಾನವೀಯ ಮೌಲ್ಯ ಮತ್ತು ಪ್ರೀತಿಯ ಆಳದ ಬಗ್ಗೆ ಹೇಳುತ್ತಾ ‘ಸುಳಿ’ ಚಿತ್ರವೂ ತನ್ನ ಕಥೆಯೊಳಗೆ ನೋಡುಗರನ್ನು ಸೆಳೆದುಕೊಳ್ಳುತ್ತದೆ. ಹೆಣ್ಣಿನ ಅಂತರಂಗದ ಭಾವನೆಗಳು, ಸಾಮಾಜಿಕ ಮೌಲ್ಯಗಳು ಎಲ್ಲವನ್ನೂ ಈ ಸಿನಿಮಾದಲ್ಲಿ ತೆರೆಮೇಲೆ ತರುವ ಪ್ರಯತ್ನ ಮಾಡಿದ್ದೇವೆ. ಮಂಡ್ಯದ ಗ್ರಾಮೀಣ ಪರಿಸರವನ್ನು ಹಿನ್ನೆಲೆಯಾಗಿಟ್ಟುಕೊಂಡು ಸಿನಿಮಾದ ಕಥೆ ಸಾಗುತ್ತದೆ’ ಎಂದು ಚಿತ್ರದ ಕಥಾಹಂದರದ ಬಗ್ಗೆ ಮಾಹಿತಿ ನೀಡಿದರು ನಿರ್ದೇಶಕಿ ರಶ್ಮಿ ಎಸ್. (ಸಾಯಿ ರಶ್ಮಿ).
‘ಸುಳಿ’ ಚಿತ್ರದ ನಾಯಕ ನಟ ಸನತ್ , ನಾಯಕಿ ಚೈತ್ರಾ ಸಾಕೇಲ್ ಮಾತನಾಡಿ, ನಿರ್ಮಾಪಕ ಬೆಟ್ಟಸ್ವಾಮಿ ಗೌಡ, ನಟರಾದ ಶಿವಕುಮಾರ ಆರಾಧ್ಯ, ಶಂಕರ ನಾರಾಯಣ್, ಸಿದ್ಧು ಮಂಡ್ಯ, ಹರಿಹರನ್, ನಟಿ ಕಾವ್ಯಾ, ಛಾಯಾಗ್ರಹಕ ವಿಕ್ರಂ ಯೋಗಾನಂದ್, ಸಾಹಿತಿ ಸತೀಶ್ ಜೋಶಿ ಚಿತ್ರದ ಬಗ್ಗೆ ಮಾತನಾಡಿದರು.






























