
ಸಂಜೆವಾಣಿ ವಾರ್ತೆ
ಹೊಸಪೇಟೆ. ಜೂ.೧ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜಮೀರ್ ಅಹಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಸ್ಥಳೀಯ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
ಸ್ಥಳೀಯ ಪತ್ರಿಕಾ ಭವನದಲ್ಲಿಂದು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಂ ಸಮುದಾಯದ ಮುಖಂಡರಾದ ಕೊತ್ವಾಲ ಮಹಮದ್ ಮೋಸಿನ್, ರಾಜ್ಯದಲ್ಲಿ ೮೦ ಲಕ್ಷಕ್ಕೂ ಅಧಿಕ ಮುಸ್ಲಿಂ ಜನಸಂಖ್ಯೆ ಇದೆ. ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಹಿತವನ್ನು ಕಾಯ್ದುಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜಾತಿ, ಧರ್ಮದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ, ಕಾಂಗ್ರೆಸ್ ಪಕ್ಷದ ಸಂಘಟನೆ ಸೇರಿದಂತೆ ಎಲ್ಲಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಮುಸ್ಲಿಂ ಸಮುದಾಯದ ಮುಖಂಡ ಜಮೀರ್ ಅಹಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡುವಂತೆ. ಈ ಮೂಲಕ ಸಾಮಾಜಿಕ ನ್ಯಾಯ ಬಲಪಡಿಸುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ ಮುಶೀರ್ ಅಹಮದ್, ಮಹಮದ್ ಸರ್ವರ್, ಮಹಮದ್ ಗೌಸ್, ಎಸ್.ಅಬ್ದುಲ್ ಗಫೂರ್, ಮಹಮದ್ ಅಬೂಬಕರ್, ಪಿ.ಅನ್ಸರ್ ಬಾಷ, ಅಥಾಯ್ ರಸೂಲ್, ಫಿರೋಜ್ ಖಾನ್ ಇದ್ದರು.

























