Home ಜಿಲ್ಲೆ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ದೇವರಾಜ ಅರಸು ನೂತನ ಪ್ರತಿಮೆ ಪ್ರತಿಷ್ಠಾಪನೆ

ಜಿಲ್ಲಾಧಿಕಾರಿ ಕಚೇರಿ ಬಳಿ ದೇವರಾಜ ಅರಸು ನೂತನ ಪ್ರತಿಮೆ ಪ್ರತಿಷ್ಠಾಪನೆ

ಸಂಜೆವಾಣಿ ನ್ಯೂಸ್
ಮೈಸೂರು.ಜೂ.26:
ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.

ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿರುವ ಈ ಪ್ರತಿಮೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಹಿಂದೆ ಇದೇ ಸ್ಥಳದಲ್ಲಿ ಸ್ಥಾಪಿಸಲಾಗಿದ್ದ ದೇವರಾಜ ಅರಸು ಅವರ ಪ್ರತಿಮೆ ಕುರಿತು ಸಾರ್ವಜನಿಕರಿಂದ ಆಕ್ಷೇಪಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಹೊಸ ಪ್ರತಿಮೆ ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ ಹೆಸರಾಂತ ಶಿಲ್ಪಿಗಳಲ್ಲಿ ಒಬ್ಬರಾದ ಅರುಣ್ ಯೋಗಿರಾಜ್ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು.

ಅರುಣ್ ಯೋಗಿರಾಜ್ ರೂಪಿಸಿರುವ ನೂತನ ಪ್ರತಿಮೆಯು ದೇವರಾಜ ಅರಸು ಅವರ ಮೂಲ ವ್ಯಕ್ತಿತ್ವ, ಮುಖಭಾವ, ಉಡುಗೆ ಹಾಗೂ ಗಾಂಭೀರ್ಯವನ್ನು ಅತ್ಯಂತ ನೈಜವಾಗಿ ಮೂಡಿಸಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.