ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಜತ ಮಹೋತ್ಸವ ಸಮಾರೋಪ ಸಮಾರಂಭ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.21
– ತಾಳ್ಮೆ, ಸಹನೆ, ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡಾಗ ಮಾತ್ರ ಸಂಘ,ಸಂಸ್ಥೆಗಳು ಬೆಳೆಯುತ್ತದೆ ಎಂದು ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ ತಿಳಿಸಿದರು.


ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀಬಸವರಾಜಸ್ವಾಮಿಗಳವರ ಅನುಭವ ಮಂಟಪದಲ್ಲಿ ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಜತ ಮಹೋತ್ಸವ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.


ಸಂಘದಲ್ಲಿ. ಪ್ರಾಮಾಣಿಕತೆ, ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಮುಂದುವರೆದಾಗ ಮಾತ್ರ ಸಂಘ, ಸಂಸ್ಥೆಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಈ ದೇಶದಲ್ಲಿ ಸುಸಂಸ್ಕøತರು, ಮಹಾಪುರುಷರು ನೆಲೆ ಹೋಗಿದ್ದಾರೆ. ಅವರು ಮಾರ್ಗದರ್ಶನ ನೀಡಿ ಹೋಗಿದ್ದಾರೆ. ಅಂತಹ ವ್ಯವಸ್ಥೆಯಲ್ಲೂ ನಾಡಿನಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ. ಜನರು ಜಾಗೃತರಾಗಿದ್ದು, ಧಾರ್ಮಿಕ ಆಚರಣೆಯ ಪರಂಪರೆ, ಮೌಲ್ಯಗಳನ್ನು ಉಳಿಸಿ-ಬೆಳಸಿಕೊಂಡು ಹೋಗಬೇಕಿದೆ ಎಂದರು.


ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶ್ರೀಬಸವೇಶ್ವರ ಪತ್ತಿನ ಸಹಕಾರ ಸಂಘ, ಸಂಗಮ ಗೃಹ ನಿರ್ಮಾಣ ಸಹಕಾರ ಸಂಘಗಳು ಸಹಮತದಿಂದ 25 ವರ್ಷದಿಂದ ಮೌಲ್ಯಯುತ ಕಾರ್ಯಕ್ರಮಗಳನ್ನು ಯಶ್ವಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಚುನಾವಣೆ ನಡೆಸದೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಂಡು ಬರುತ್ತಾ ಸಮಾಜ ಅಭಿವೃದ್ಧಿ ಶ್ರಮಿಸುತ್ತಾ ಸಮಾಜ ಮುಖಿ ಕಾರ್ಯದಲ್ಲಿ ನಿರತರಾಗಿರುವುದು ಶ್ಲಾಘನೀಯವಾದದ್ದು ಎಂದು ವೆಚ್ಚಿಗೆ ವ್ಯಕ್ತಪಡಿಸಿದರು.
ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ. ಸಂಘವು. ಕಳೆದ 25 ವರ್ಷಗಳಿಂದ ಸಮಾಜದ ಅಭಿವೃದ್ಧಿಯ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದರು.


ಸಂಘವು ಸಮುದಾಯದ ನೌಕರರ ನಡುವೆ ಸಂಪರ್ಕ, ಸಹಯೋಗ, ಸಂಸ್ಕಾರ, ಸಮರ್ಪಣೆ ಮತ್ತು ಸೇವಾ ಮನೋಭಾವ ಕಲ್ಪಿಸುವ ಸೇತುವೆಯಾಗಿದ್ದು, ಕಡಿಮೆ ಬಡ್ಡಿ ದರದಲ್ಲಿ ಗೃಹ ನಿವೇಶನ ಖರೀದಿಯೂ ಸೇರಿದಂತೆ ನಾನಾ ಅಗತ್ಯಗಳಿಗೆ ಆರ್ಥಿಕ ಸಹಾಯ ನೀಡುತ್ತಿರುವುದು ಅಲ್ಲದೆ ಸಂಗಮ ಗೃಹ ನಿರ್ಮಾಣ ಸಹಕಾರ ಸಂಘದಿಂದ ಅತಿ ಕಡಿಮೆ ಬೆಲೆಯಲ್ಲಿ ಭೂಮಿ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಸಂಘಗಳು ಮತ್ತಷ್ಟು ಸಮಾಜಮುಖಿ ಕೆಲಸ ಮಾಡಲಿ ಎಂದು ಆಶಿಸಿದರು. ಪ್ರತಿಭಾ ಪುರಸ್ಕಾರ: ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.


ಮರಿಯಾಲ ಶ್ರೀಮುರುಘರಾಜೇಂದ್ರಸ್ವಾಮಿ ಮಹಾಸಂಸ್ಥಾನ ಶ್ರೀ ಇಮ್ಮಡಿ ಮುರುಘರಾಜೇಂದ್ರಸ್ವಾಮೀಜಿ, ಶ್ರೀ ಸಿದ್ಧಮಲ್ಲೇಶ್ವರ ವಿರಕ ಮಠದ ಚನ್ನಬಸವಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಿದ್ದರು. ಸಂಘದ ಅಧ್ಯಕ್ಷ ಸಿದ್ಧಮಲ್ಲಪ್ಪ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರಯ್ಯ ಶ್ರೀಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಗೌರಿಶಂಕರ, ಸಂಗಮ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಿ.ಎಲ್.ಮುದ್ದು ಬಸವಣ್ಣ ಇತರರು ಹಾಜರಿದ್ದರು.