Home ಜಿಲ್ಲೆ ಮೈಸೂರು ಜೆಡಿಎಸ್‍ನ್ನು ಬೆಳೆಸಿಕೊಂಡು ಹೋಗುವುದು ನಮ್ಮ ಜವಬ್ದಾರಿ: ಶಾಸಕ ಮಂಜು

ಜೆಡಿಎಸ್‍ನ್ನು ಬೆಳೆಸಿಕೊಂಡು ಹೋಗುವುದು ನಮ್ಮ ಜವಬ್ದಾರಿ: ಶಾಸಕ ಮಂಜು

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ನ.19:
ತಾಲ್ಲೂಕಿನಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರು ಹೋಬಳಿ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ತಿಳಿಸಿದರು.
ಪಟ್ಟಣದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ನೂತನ ಹೋಬಳಿ ಅಧ್ಯಕ್ಷರುಗಳಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ಅಭಿನಂದಿಸಿ ಗೌರವಿಸಿದರು.


ಬಳಿಕ ಮಾತನಾಡಿದ ಶಾಸಕ ಹೆಚ್.ಟಿ.ಮಂಜು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಣ್ಣ ಹಾಗೂ ಯುವ ಘಟಕ ರಾಜ್ಯಾದ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಟ್ಟಿ ಬೆಳೆಸಿರುವ ಪಕ್ಷವನ್ನು ಉಳಿಸಿ ಬೆಳಸಿಕೊಂಡು ಹೋಗಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿದೆ. ಜೆಡಿಎಸ್ ಪಕ್ಷ ಕಾರ್ಯಕರ್ತರ ಪಕ್ಷವಾಗಿದೆ. ಪಕ್ಷದ ಸಂಘಟನೆಯಲ್ಲಿ ಹೋಬಳಿ ಘಟಕಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ತಲುಪಿಸುವ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ ಎಂದು ಹೇಳಿದರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಪಕ್ಷದ ಮುಖಂಡರು ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಪಕ್ಷವನ್ನು ಬಲಿಷ್ಠಗೊಳಿಸಿ, ಮುಂಬರುವ ರಾಜಕೀಯ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸಲು ಎಲ್ಲರೂ ಶ್ರಮಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪಕ್ಷದ ವರ್ಚಸ್ಸನ್ನು ಹೆಚ್ಚಿಸಬೇಕು ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೀಳನೆರೆ ಹೋಬಳಿಯ ವಿಜಯ್ ಕುಮಾರ್, ಕಸಬಾ ಹೋಬಳಿಯ ಕೃಷ್ಣೇಗೌಡ, ಸಂತೆಬಾಚಹಳ್ಳಿ ಹೋಬಳಿಯ ಮಾಳಗೂರು ನವೀನ್, ಬೂಕನಕೆರೆ ಹೋಬಳಿಯ ರಾಜಶೇಖರ್, ಅಕ್ಕಿಹೆಬ್ಬಾಳು ಹೋಬಳಿಯ ರಮೇಶ್ ಹಾಗೂ ಕಿಕ್ಕೇರಿ ಹೋಬಳಿಯ ಕೃಷ್ಣೇಗೌಡ ಅವರನ್ನು ಪಕ್ಷದ ವತಿಯಿಂದ ಗೌರವಿಸಲಾಯಿತು.


ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇನಹಳ್ಳಿ ಮೋಹನ್, ಕಾರ್ಯಾಧ್ಯಕ್ಷ ಮೆಣಸ ಮಹದೇವೇಗೌಡ, ತೋಂಟಪ್ಪ ಶೆಟ್ಟಿ, ರೈತಮೊರ್ಚಾ ಘಟಕದ ಅಧ್ಯಕ್ಷ ಹುಲ್ಲೇಗೌಡ, ಅಕ್ಕಿಹೆಬ್ಬಾಳು ರಘು, ಟಿಎಪಿಸಿಎಂಎಸ್ ನಿರ್ದೇಶಕ ನಾಗರಘಟ್ಟ ದಿಲೀಪ್ ಕುಮಾರ್, ಕುರುಬಹಳ್ಳಿ ನಾಗೇಶ್, ಅಘಲಯ ಶ್ರೀಧರ್, ರಾಮಕೃಷ್ಣಗೌಡ, ಸಾಮಿಲ್ ರವಿಕುಮಾರ್, ವೆಂಕಟೇಶ್, ವಸಂತಕುಮಾರ್,ಬಸವಲಿಂಗಪ್ಪ,ಕಿಕ್ಕೇರಿ ಕಾಯಿ ಮಂಜೇಗೌಡ, ಡಿ.ಪಿ.ಸ್ವಾಮಿಗೌಡ, ಆದಿಹಳ್ಳಿ ನಾಗೇಶ್, ಸೋಮಶೇಖರ್, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.