Home Uncategorized ಡೆಂಗ್ಯೂ ಜ್ವರ: ಸಚಿವ ಜಿತನ್ ರಾಮ್ ಆಸ್ಪತ್ರೆಗೆ ದಾಖಲು

ಡೆಂಗ್ಯೂ ಜ್ವರ: ಸಚಿವ ಜಿತನ್ ರಾಮ್ ಆಸ್ಪತ್ರೆಗೆ ದಾಖಲು

ನವದೆಹಲಿ,ಸೆ.7-ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಆರೋಗ್ಯ ಸ್ಥಿತಿ ಏರುಪೇರಾಗಿದ್ದು, ನವದೆಹಲಿಯ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ತೀವ್ರ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 82 ವರ್ಷದ ಮಾಂಝಿ ಅವರನ್ನು ಭಾನುವಾರ ಸಂಜೆ ದೆಹಲಿ ಏಮ್ಸ್‍ನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆತರಲಾಗಿದ್ದು, ರಾತ್ರಿ ವೇಳೆಗೆ ಐಸಿಯುಗೆ ಸ್ಥಳಾಂತರಿಸಲಾಯಿತು. ಶಂಕಿತ ಡೆಂಗ್ಯೂ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರ ವಿಶೇಷ ತಂಡವು ಅವರಿಗೆ ಅಗತ್ಯ ವೈದ್ಯಕೀಯ ತಪಾಸಣೆ ನಡೆಸಿ, ಅವರ ಆರೋಗ್ಯ ಸ್ಥಿತಿಯನ್ನು ತೀವ್ರ ನಿಗಾದಲ್ಲಿರಿಸಿದೆ.


ಇದಕ್ಕೂ ಮುನ್ನ ಕಳೆದ ವಾರ ಪಟ್ನಾದಲ್ಲಿದ್ದಾಗಲೂ ಜ್ವರ ಮತ್ತು ತೀವ್ರ ನಿಶ್ಯಕ್ತಿಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಏಮ್ಸ್ ವೈದ್ಯಕೀಯ ಮಂಡಳಿಯು ಚಿಕಿತ್ಸೆಯನ್ನು ಮುಂದುವರಿಸಿದೆ.
ದೆಹಲಿಯಲ್ಲಿ ವೈದ್ಯಕೀಯ ಪರೀಕ್ಷೆಯ ನಂತರ, ಮಾಂಝಿಗೆ