
ಸಂಜೆವಾಣಿ ವಾರ್ತೆ
ಮಂಡ್ಯ:ಅ.15:- ನಗರದ ತಮಿಳು ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವುದರ ಜೊತೆಗೆ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರಸ್ತೆ, ಚರಂಡಿ ಹಾಗೂ ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸ ಲಾಯಿತು.
ತಮಿಳು ಕಾಲೋನಿಯಲ್ಲಿ ವಾಸಿಸುತ್ತಿರುವ ನಿವಾಸಿ ಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು. ಜನರಿಗೆ ಅಗತ್ಯವಾದ ಶುದ್ಧ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕ ಒದಗಿಸಬೇಕು. ರಸ್ತೆಗಳನ್ನು ಅಭಿವೃದ್ಧಿಪಡಿಸಿ, ಚರಂಡಿ ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಮೂಲಕ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸ ಬೇಕು ಎಂದು ಪ್ರತಿಭಟನಾ ಕಾರರು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಡಿಎಸ್ಎಸ್ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಅಖಿಲ ಭಾರತ ವಕೀಲರ ಸಂಘದ ಮಂಡ್ಯ ಅಧ್ಯಕ್ಷ ಬಿ.ಟಿ. ವಿಶ್ವನಾಥ್, ಸಿಪಿಐ(ಎಂ) ಮಂಡ್ಯ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಹಾಗೂ ಡಿಎಸ್ಎಸ್ ರಾಜ್ಯ ಸಂಚಾಲಕ ಅಂದಾನಿ, ಮುಕುಂದ, ಎಸ್.ಟಿ.ಡಿ. ನಾಗರಾಜು, ಎಂ.ವಿ.ಕೃಷ್ಣ, ಲಕ್ಷ್ಮಣ್ ಚೀರನಹಳ್ಳಿ, ದೇವಯ್ಯ, ನರಸಿಂಹ ಮೂರ್ತಿ, ಶಿವರುದ್ರಯ್ಯ, ಅಹಿಂದ ಹನುಮೇಶ್, ಚಂದ್ರಶೇಖರ್, ಕೃಷ್ಣ, ಕುಮಾರ್, ನಾಗವೇಣಿ, ಕಲೈಮಗಲ್, ವೆಂಕಟೇಶನ್, ಅಂಬು, ಸಂತೋಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


























