
ಮೂಡುಬಿದಿರೆ- ಅಕ್ಟೋಬರ್ ೨೭ ರಂದು ಮೂಡುಬಿದಿರೆಯ ತೋಡಾರ್ನಲ್ಲಿ ಡಿಬಿಎಲ್ ಕನ್ಸ್ಟ್ರಕ್ಷನ್ ಕಂಪನಿಯು ಹೆದ್ದಾರಿ ನಿರ್ಮಾಣ ಕಾರ್ಯಕ್ಕಾಗಿ ಬಳಸುತ್ತಿದ್ದ ಮ್ಯಾಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಮಂಗಳೂರು-ಬಿಕರ್ನಕಟ್ಟೆ-ಸಾವನೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆಯ ಭಾಗವಾಗಿ ಕಾಮಗಾರಿ ಸ್ಥಳದಲ್ಲಿ ಇರಿಸಲಾಗಿದ್ದ ಮ್ಯಾಟ್ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು, ಶೀಘ್ರದಲ್ಲೇ ಬೆಂಕಿ ಆವರಿಸಿತು.
ಬೆಂಕಿಯ ತೀವ್ರತೆಗೆ ಮ್ಯಾಟ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಇಡೀ ಪ್ರದೇಶದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿತ್ತು. ಇದು ಸುತ್ತಮುತ್ತಲಿನ ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಈ ಭೀಕರ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.
ಕಾಮಗಾರಿ ಸ್ಥಳದಲ್ಲಿ ಮ್ಯಾಟ್ಗೆ ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಮತ್ತು ಇದರಿಂದ ಉಂಟಾದ ನಷ್ಟದ ಅಂದಾಜು ಇನ್ನು ಸಂಪೂರ್ಣವಾಗಿ ತಿಳಿದುಬಂದಿಲ್ಲ






















