
ಧರ್ಮಸ್ಥಳ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
























