
ಸಂಜೆವಾಣಿ ವಾರ್ತೆ
ಹುಣಸೂರು,ಜೂ.09:- ಹುಣಸೂರು ನಗರ ಮತ್ತು ಗ್ರಾಮಾಂತರ ಹಾಗೂ ಬಿಳಿಕೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರುಮತ್ತು ತಮ್ಮ ಸ್ನೇಹಜೀವಿ ಬಳಗದೊಂದಿಗೆ ನಿನ್ನೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನ ಕುಮಾರ ಕೃಪ ಅತಿಥಿಗೃಹದಲ್ಲಿ ಭೇಟಿಯಾದ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮುಖ್ಯಮಂತ್ರಿಗಳ ಕೈಗೆ ಬೆಳ್ಳಿ ಕಡಗವನ್ನು ತೊಡಿಸಿ ಸನ್ಮಾನಿಸಿದರು.
ಮುಖ್ಯಮಂತ್ರಿಗಳು ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಎಚ್.ಪಿ.ಮಂಜುನಾಥ್ ಹುಣಸೂರು ಕ್ಷೇತ್ರದಲ್ಲಿ ಗೆಲುವು ಪಕ್ಕಾ ಎಂಬ ನಿರೀಕ್ಷೆಯಲ್ಲಿ ಇದ್ದೆವು, ಆದರೆ ಅತ್ಯಲ್ಪ ಮತಗಳ ಅಂತರದಲ್ಲಿ ಸೋತಿದ್ದಾರೆ. ಈ ಸೋಲಿಗೆ ಕಾರ್ಯಕರ್ತರು ಎದೆಗುಂದದೆ ಕಾಂಗ್ರೆಸ್ ಪಕ್ಷವನ್ನು ಸದೃಢ ಮತ್ತು ಮಂಜುನಾಥ್ ಕೈ ಬಲಪಡಿಸಲು ಮತ್ತಷ್ಟು ಶ್ರಮವಹಿಸಬೇಕು. ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲಾ ಸಹಕಾರವನ್ನು ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಮುಂಬರುವ 2028 ರ ಚುನಾವಣೆಯಲ್ಲಿ ಮಂಜುನಾಥ್ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಇದೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್ ಹಾಗೂ ನೂತನ ಸಚಿವ ಯತಿಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಶುಭಾಶಯ ಕೋರಲಾಯಿತ್ತು.
ಈ ವೇಳೆ ಕೆ.ಪಿ.ಸಿ.ಸಿ ರಾಜ್ಯ ವಕ್ತಾರ ಎಂ ಲಕ್ಷ್ಮಣ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಡಿ.ಕೆ. ಕುನ್ನೇಗೌಡ, ನಾಯಕ ಸಂಘದ ಅಧ್ಯಕ್ಷ ಅಣ್ಣಯ್ಯನಾಯಕ, ಹುಣಸೂರು ತಾಲ್ಲೂಕು ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಗದ್ದಿಗೆ ದೇವರಾಜ್, ಗಣಪತಿ ಇಂಡಲ್ಕರ್, ಬ್ಲಾಕ್ ಅಧ್ಯಕ್ಷರುಗಳಾದ ರವಿಪ್ರಸನ್ನ, ಬಾಲಸುಂದರ್, ಬಿಳಿಕೆರೆ ಪ್ರೇಮ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಲ್ಕುಣಿಕೆ ರಾಘು, ಅಕ್ರಮ ಸಕ್ರಮ ಸಮಿತಿ ಸದಸ್ಯ ಎಚ್. ಎಸ್. ಕುಮಾರ್, ಉದ್ಯಮಿಗಳಾದ ಟಿ.ಕೃಷ್ಣ, ಕಾರ್ತಿಕ್ , ಮಹಿಳಾ ಅಧ್ಯಕ್ಷರಾದ ಸುನಿತಾ ಜಯರಾಮೇಗೌಡ, ಸುಮಿತ್ರ, ಯುವ ಅಧ್ಯಕ್ಷರಾದ ದರ್ಶನ್, ಕಾರ್ತಿಕ್ ಸೇರಿದಂತೆ 500ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರುಗಳು ಇದ್ದರು.



























