
ಸುಳ್ಯ:ಸಾರ್ವಜನಿಕ ಆರಾಧನಾ ಸಮಿತಿ ಪಂಜ, ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ-೨೦೨೬ ಇದರ ವತಿಯಿಂದ ಜರುಗಿದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತ್ತು.
ಬುಧವಾರ ಬೆಳಗಿನ ಪೂಜೆ, ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಿತು .ಅಪರಾಹ್ನ ವೈಭವದ ಶೋಭಾಯಾತ್ರೆಯು ದೇಗುಲದ ವಠಾರದಿಂದ ಪಂಜ ಪೇಟೆಯ ಮೂಲಕ ಮುಖ್ಯರಸ್ತೆಯಲ್ಲಿ ಸಾಗಿ ಪಂಜ ಹೊಳೆಯ ಸೇತುವೆ ಬಳಿ ಜಲಸ್ತಂಭನ ಜರುಗಿತು. ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಗೊಂಬೆಗಳು, ನಾಸಿಕ್ ಬ್ಯಾಂಡ್, ಬ್ಯಾಂಡ್- ವಾಲಗ, ಕೀಲು ಕುದುರೆ ವಿಶೇಷ ಆಕರ್ಷಣೆಯಾಗಿತ್ತು.
ಇದೇ ವೇಳೆ ಪಂಜ ಬಸ್ ನಿಲ್ದಾಣ ಬಳಿ ಪ್ರಥಮ ಬಾರಿಗೆ ವಿಶೇಷ ಆಕರ್ಷಣೆಯ ಪಿಲಿನಲಿಕೆ ಸ್ಪರ್ಧೆ ನಡೆದು ಪ್ರೇಕ್ಷಕರ ಮನರಂಜಿಸಿತು .ಗಣೇಶೋತ್ಸವ ಸಮಿತಿ ಅಧ್ಯಕ್ಷ ತೀರ್ಥಾನಂದ ಕೊಡಂಕಿರಿ, ಸಾರ್ವಜನಿಕ ಆರಾಧನಾ ಸಮಿತಿಯ ಅಧ್ಯಕ್ಷರಾದ ಸವಿತಾರ ಮುಡೂರು, ಗೌರವಾಧ್ಯಕ್ಷರಾದ ಮಾಧವ ಗೌಡ ಜಾಕೆ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಸಾರ್ವಜನಿಕ ಆರಾಧನಾ ಸಮಿತಿಯ ಕಾರ್ಯದರ್ಶಿ ಜಯರಾಮ ಕಲ್ಲಾಜೆ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಹೇಮಂತ್ ರೈ ಕೆ, ಖಜಾಂಜಿ ಪುನೀತ್ ಮೂಲೆಮನೆ, ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.
































