Home ಜಿಲ್ಲೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ತಹಶೀಲ್ದಾರ್ ಶೃತಿ. ಎಂ ಕರೆ

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ತಹಶೀಲ್ದಾರ್ ಶೃತಿ. ಎಂ ಕರೆ

ಸಂಜೆವಾಣಿ ವಾರ್ತೆ

ಹೊಸಪೇಟೆ.ಜೂ.23 ಇದೇ ಜೂ.28 ರಿಂದ ಜರುಗಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹೊಸಪೇಟೆ ತಾಲೂಕಿನಲ್ಲಿ ಸಂಪೂರ್ಣವಾಗಿ ಯಶಸ್ವಿÀ್ವಗೊಳಿಸುವಂತೆ ತಹಶೀಲ್ದಾರ್ ಶೃತಿ ಮಳ್ಳಪ್ಪಗೌಡ್ರು ಕರೆ ನೀಡಿದರು.

ಸ್ಥಳೀಯ ತಹಶೀಲ್ದಾರರ ಕಛೇರಿಯಲ್ಲಿ ಸೋಮವಾರ ಜರುಗಿದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತಾಲ್ಲೂಕು ಟಾಸ್ಕ್ ಪೋರ್ಸ ಕಮಿಟಿಯಲ್ಲಿರುವ ನಗರಸಭೆ, ಪುರಸಭೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಕೆ.ಇ.ಬಿ, ಸಾರಿಗೆ ಇಲಾಖೆ, ಗೃಹರಕ್ಷಕ ದಳ ಹಾಗೂ ಅರೋಗ್ಯ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸುವ ಮೂಲಕ ತಾಲೂಕಿನಲ್ಲಿರುವ ಸೊನ್ನೆಯಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮ ಯಶಸ್ವಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಇದೇ ಸಂದರ್ಭದಲ್ಲಿ ತಹಶೀಲ್ದಾರರು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.

ತಾಲ್ಲೂಕು ಅರೋಗ್ಯಾಧಿಕಾರಿ ಡಾ.ವಿನೋದ್, ಪಲ್ಸ್ ಪೋಲಿಯೊ ಬೂತ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಉಪ ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ ಟ್ರಾನ್ಜಿಟ್ ಬೂತ್ ಗಳ ಬಗ್ಗೆ ವಿವರವಾಗಿ ಸಭೆ ತಿಳಿಸಿದರು.

ಸಭೆಯಲ್ಲಿ ಅರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಸ್ಲಂ ಜನರ ಸಂಘಟನೆ ಕಾರ್ಯದರ್ಶಿ ಎನ್.ವೆಂಕಟೇಶ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಖಾಸಗಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರು, ರೋಟರಿ ಕ್ಲಬ್, ಸ್ಪೂರ್ತಿ ವೇದಿಕೆ, ವಿಶೇಷ ಚೇತನರ ಸಂಘದ ಪಧಾದಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.