
ಸಂಜೆವಾಣಿ ನ್ಯೂಸ್
ಮೈಸೂರು, ಜು.15:- ನಗರದಲ್ಲಿ ಪಾದಚಾರಿಗಳಿಗೆ ತೊಂದರೆಯಾಗುತ್ತಿದ್ದ ಪಾದಚಾರಿ ಮಾರ್ಗಗಳ ಅತಿಕ್ರಮಣ ತೆರವುಗೊಳಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ-6 ರವತಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿತು.
ಎಲ್ಲಿ ನಡೆಯಿತು ಕಾರ್ಯಾಚರಣೆ:
ಮೈಸೂರು ಮಹಾನಗರ ಪಾಲಿಕೆಯ ವಲಯ-6 ವ್ಯಾಪ್ತಿಯ ಆಯುರ್ವೇದಿಕ್ ವೃತ್ತದಿಂದ ಸಬರ್ಬನ್ ಬಸ್ ನಿಲ್ದಾಣದವರೆಗಿನ ಇರ್ವಿನ್ ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗಗಳಲ್ಲಿ ಈ ಕಾರ್ಯಾಚರಣೆ ನಡೆಯಿತು.
ಪೂರ್ವ ಪ್ರಚಾರ ನೀಡಲಾಗಿತ್ತು
ಈ ಕಾರ್ಯಾಚರಣೆಗೆ ಮುನ್ನ ಜುಲೈ 14ರಂದೇ ಮೈಕ್ ಮೂಲಕ ವ್ಯಾಪಕ ಪ್ರಚಾರ ನಡೆಸಲಾಗಿತ್ತು. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದಂತೆ ಮತ್ತು ಸ್ವಯಂಪ್ರೇರಿತವಾಗಿ ಒತ್ತುವರಿ ತೆರವುಗೊಳಿಸಿಕೊಳ್ಳುವಂತೆ ವ್ಯಾಪಾರಸ್ಥರು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿತ್ತು.
ಏನೇನು ತೆರವು:
ಪೆÇಲೀಸ್ ಇಲಾಖೆ ಮತ್ತು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಯ ಜಂಟಿ ಸಹಯೋಗದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಾದಚಾರಿ ಮಾರ್ಗಗಳ ಮೇಲೆ ನಿರ್ಮಿಸಲಾಗಿದ್ದ
ತಾತ್ಕಾಲಿಕ ಶೆಡ್ಗಳು, ವ್ಯಾಪಾರ ವಸ್ತುಗಳು ಮತ್ತು ಇತರೆ ಅತಿಕ್ರಮಣಗಳನ್ನುತೆರವುಗೊಳಿಸಲಾಯಿತು.
ಪಾಲಿಕೆಯ ಎಚ್ಚರಿಕೆ:
ನಗರದಲ್ಲಿ ಪಾದಚಾರಿಗಳಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವುದೇ ಈ ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿಯೂ ನಗರದ ವಿವಿಧ ಪ್ರದೇಶಗಳಲ್ಲಿ ಇದೇ ರೀತಿಯ ಅತಿಕ್ರಮಣ ತೆರವು ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.


































