
ಸಂಜೆವಾಣಿ ನ್ಯೂಸ್
ಮೈಸೂರು, ನ.19:- ಇ-ಖಾತಾ ಪಡೆಯಲು ಜನರು ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ಕೈಗೊಂಡಿರುವ ವಿಶೇಷ ಅಭಿಯಾನಕ್ಕೆ ಭರ್ಜರಿ ಸ್ಪಂದನೆ ದೊರೆತಿದೆ.
ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ನಡೆದ ವಿಶೇಷ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಒಂದೇ ದಿನದಲ್ಲಿ 1,731 ಇ-ಖಾತಾಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಇದಕ್ಕೂ ಮುನ್ನ ನಡೆದ ಮೊದಲ ಹಂತದಲ್ಲಿ 590 ಇ-ಖಾತಾಗಳನ್ನು ವಿತರಿಸಲಾಗಿದ್ದು, ಎರಡು ಹಂತಗಳಲ್ಲಿ ಒಟ್ಟು 2,303 ಇ-ಖಾತಾಗಳು ಜನರ ಕೈ ಸೇರಿವೆ.
ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರ ಉಪಸ್ಥಿತಿಯಲ್ಲಿ ಇ-ಖಾತಾಗಳನ್ನು ವಿತರಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ತಮ್ಮ ಇ-ಖಾತಾಗಳನ್ನು ಸ್ವೀಕರಿಸಿದರು.
ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ, ಸರಳವಾಗಿ ಹಾಗೂ ಪಾರದರ್ಶಕವಾಗಿ ಇ-ಖಾತಾ ಸೇವೆ ದೊರೆಯುತ್ತಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ತ್ವರಿತ ವಿತರಣಾ ವ್ಯವಸ್ಥೆ ಪಾಲಿಕೆಯ ವಿಶೇಷ ಅಭಿಯಾನಕ್ಕೆ ಮತ್ತಷ್ಟು ಮೆಚ್ಚುಗೆ ತಂದಿದೆ.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಆಯುಕ್ತರು, ಪಾಲಿಕೆ ಆಯುಕ್ತರು, ಉಪ ಆಯುಕ್ತರು, ಎಲ್ಲಾ ವಲಯ ಆಯುಕ್ತರು, ಕಂದಾಯ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಹಾಗೂ ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.
ಇ-ಖಾತಾ ವಿತರಣೆಯಲ್ಲಿ ಹೊಸ ದಾಖಲೆ ನಿರ್ಮಿಸುವತ್ತ ಮೈಸೂರು ಪಾಲಿಕೆ ಹೆಜ್ಜೆ ಇಟ್ಟಿದ್ದು, ಸಾರ್ವಜನಿಕರಿಗೆ ನೇರ ಸೇವೆ ನೀಡುವ ಪ್ರಯತ್ನಕ್ಕೆ ಈ ಅಭಿಯಾನ ಗಮನ ಸೆಳೆದಿದೆ.
ಹೋಟೆಲ್, ಉಪಾಹಾರ ಗೃಹಗಳು ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿ – ಪಾಲಿಕೆ ಮನವಿ





















