Home ಜಿಲ್ಲೆ ಮಂಗಳೂರು ಪಿಕ್‌ಅಪ್ ವಾಹನದ ಹಿಂಬದಿ ೮?೧೦ ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿ ಚಾಲನೆ |ಸಾಮಾಜಿಕ ಜಾಲತಾಣದಲ್ಲಿ ವೈರಲ್; ಪ್ರಕರಣ...

ಪಿಕ್‌ಅಪ್ ವಾಹನದ ಹಿಂಬದಿ ೮?೧೦ ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿ ಚಾಲನೆ |ಸಾಮಾಜಿಕ ಜಾಲತಾಣದಲ್ಲಿ ವೈರಲ್; ಪ್ರಕರಣ ದಾಖಲು, ವಾಹನ ವಶ

ಕಾಪು: ಪಿಕ್‌ಅಪ್ ವಾಹನದ ಹಿಂಬದಿ ಬಾಡಿಯಲ್ಲಿ ಸುಮಾರು ೮ರಿಂದ ೧೦ ಮಕ್ಕಳನ್ನು ನಿಲ್ಲಿಸಿಕೊಂಡು ಮಾನವ ಜೀವಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ವಾಹನ ಚಲಾಯಿಸಿದ ಘಟನೆಗೆ ಸಂಬಂಧಿಸಿ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಸೆ.೧೦ರಂದು ಸಂಜೆ ೭.೩೦ರ ಸುಮಾರಿಗೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಅಂಡರ್‌ಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರ ಮಂಗಳೂರು?ಉಡುಪಿ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಏಐ-೩೩-ಃ-೭೪೬೩ ನೋಂದಣಿ ಸಂಖ್ಯೆಯ ಪಿಕ್‌ಅಪ್ ವಾಹನದ ಚಾಲಕನು ವಾಹನದ ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ, ಸುಮಾರು ೮ರಿಂದ ೧೦ ಮಕ್ಕಳನ್ನು ವಾಹನದ ಹಿಂಬದಿಯ ಬಾಡಿಯಲ್ಲಿ ನಿಲ್ಲಿಸಿಕೊಂಡು ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಈ ಬಗ್ಗೆ ಪರಿಶೀಲನೆ ನಡೆಸಿದ ಕಾಪು ಪೊಲೀಸರು ಸೆ.೧೧ರಂದು ಅಪರಾಧ ಕ್ರಮಾಂಕ ೧೦೯/೨೦೨೬ರಂತೆ ಃಓS ಕಲಂ ೨೮೧, ೧೨೫ ಹಾಗೂ Iಒಗಿ ಂಛಿಣ ಕಲಂ ೬೬ ಡಿ/ತಿ ೧೯೨(ಂ), ೧೦೦ ಡಿ/ತಿ ೧೭೭ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಪಿಕ್‌ಅಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಮುಂದುವರಿದಿದೆ.