ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮಂಗಳೂರು- ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಲನಿರ್ಂಗ್ ಲಿಂಕ್ಸ್ ಫೌಂಡೇಶನ್ ಇವರ ಸಹಯೋಗದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಉಪಸಮಿತಿಯ ಅಧ್ಯಕ್ಷ ಪೊ?ರ. ಜಿ. ಶ್ರೀನಿಕೇತನ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಅನೇಕ ನೀತಿಗಳು ಹಾಗೂ ನವೀನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಸಾಧನೆಗೆ ಪೂರಕವಾದ ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. ಮಕ್ಕಳು ಪ್ರಶ್ನಿಸುವ ಹಾಗೂ ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿಜ್ಞಾನ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಹಾಗೂ ಸಾಧನೆಗಳತ್ತ ಮುಂದಾಗಬೇಕು ಎಂದು ಪ್ರೇರಣೆ ನೀಡಿದರು.
ಡಯಟ್ ಹಿರಿಯ ಉಪನ್ಯಾಸಕರ ಶ್ರೀನಿವಾಸ ಅಡಿಗ ಮಾತನಾಡಿ, ಕಲಿಕೆ ಬರೀ ತರಗತಿಗೆ ಸೀಮಿತವಾಗಬಾರದು. ಜ್ಞಾನ, ಸೃಜನಾಶೀಲತೆ, ಕ್ರೀಯಾತತ್ಪರತೆ, ಸಂಶೋಧನಾ ಭಾವನೆಗಳು ಒಟ್ಟು ಸೇರಿದಾಗ ಮಾತ್ರ ವಿದ್ಯಾರ್ಥಿಗಳ ಸಾಮಾಜಿಕ, ಭೌತಿಕ, ಶೈಕ್ಷಣಿಕ ಬೆಳವಣಿಗೆಗಳು ಆಗಲು ಸಾಧ್ಯ. ಹೊಸ ಹೊಸ ವಿಚಾರಗಳನ್ನು ತಿಳಿಯಬೇಕಾದರೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕೆಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿಜ್ಞಾನ ಸಂವಹನಕಾರರಾದ ನಂದಿತಾ ಜಯರಾಜ್ ಮಾತನಾಡಿ, ಭಾರತದ ಮಹಿಳಾ ವಿಜ್ಞಾನಿಗಳಾದ ಅಣ್ಣಾ ಮಣಿ ಮತ್ತು ಕಮಲಾ ಸೋನಿ ಮುಂತಾದವರ ಮಹತ್ವದ ಸಾಧನೆಗಳನ್ನು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೇಂದ್ರದ ನಿರ್ದೇಶಕ ಡಾ. ಅಶೋಕ್ ಕೆ.ಆರ್ ಮಾತನಾಡಿ, ಇಂದಿನ ಯುವಪೀಳಿಗೆ ಡಿಜಿಟಲ್ ವ್ಯಸನಕ್ಕೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಮೊಬೈಲ್ ಫೊ?ನ್‌ಗಳು ಜ್ಞಾನಾರ್ಜನೆಗೆ, ಸಂವಹನಕ್ಕೆ ಮತ್ತು ನವೀನತೆಯ ಅಭಿವೃದ್ಧಿಗೆ ವರವಾಗಿದ್ದರೂ, ಅವುಗಳ ಅತಿಯಾದ ಅವಲಂಬನೆ ಶಾಪವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.
ಸಮಾರೋಪ:
ಸಮಾರೋಪ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದ್ದರು. ಅವರು ಮಾತನಾಡಿ, ಸ್ವಾಭಿಮಾನದ ಬದುಕು ಶಿಕ್ಷಣದಿಂದ ಮಾತ್ರ ಸಾಧ್ಯ. ಒಳ್ಳೆಯ ಮಾನವೀಯ ಗುಣಗಳನ್ನು ಸಂಪಾದಿಸಿಕೊಂಡು ದೇಶ ಬಲಿಷ್ಠವಾಗಲು ವಿದ್ಯಾರ್ಥಿಗಳೆಲ್ಲರೂ ಕಂಕಣ ಬದ್ದರಾಗಬೇಕು. ನಾವು ವಿದ್ಯಾರ್ಥಿ ದೆಸೆಯಲ್ಲಿ ಮಾಡಿದಂತಹ ವಿಜ್ಞಾನ ಮಾದರಿಗಳು ಮಾರುಕಟ್ಟೆಗೆ ಬಂದು ಪ್ರಸಿದ್ಧಿಯನ್ನು ಪಡೆದಿದೆ. ಮುಂದಿನ ದಿನಮಾನಗಳಲ್ಲಿ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸಬೇಕೆಂದು ತಿಳಿಸಿದರು.
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರಮಾಣಪತ್ರ ನೀಡಿ ಸಭಾಧ್ಯಕ್ಷರು ಗೌರವಿಸಿದರು.
ಲನಿರ್ಂಗ್ ಲಿಂಕ್ಸ್ ಫೌಂಡೇಶನ್ ವತಿಯಿಂದ ಚೀಫ್ ಮ್ಯಾನೇಜರಾದ ಮಂಜುನಾಥ್ ಹಾಗೂ ಶ್ರೀಕಾಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಸ್ವಾಗತಿಸಿದರು. ಕೇಂದ್ರದ ಕ್ಯುರೇಟರ್ ಜಗನ್ನಾಥ್ ನಿರೂಪಿಸಿದರು. ಶೈಕ್ಷಣಿಕ ಸಹಾಯಕಿ ರಶ್ಮಿ ಕೆ.ಎಮ್ ವಂದಿಸಿದರು.
ಶೆಲ್ ಪ್ರಾಯೋಜಕತ್ವದ ಎನ್ ಎಕ್ಸ್-ಫೊ?ಲೀರರ್ಸ್ ಯೋಜನೆಯಡಿಯಲ್ಲಿ ಲನಿರ್ಂಗ್ ಲಿಂಕ್ಸ್ ಫೌಂಡೇಶನ್ ವತಿಯಿಂದ ದ.ಕ ಮತ್ತು ಉಡುಪಿ ಜಲ್ಲೆಯ ವಿವಿಧ ಶಾಲೆಗಳ ಸುಮಾರು ೨೮ ವಿಜ್ಞಾನ ಮಾದರಿಗಳನ್ನು ಪ್ರದರ್ಶನ ಮಾಡಲಾಗಿತ್ತು. ಜೊತೆಗೆ ವಿಜ್ಞಾನ ಕೇಂದ್ರದ ವತಿಯಿಂದ ಡ್ರಾಯಿಂಗ್ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.