Home ಜಿಲ್ಲೆ ಮಂಗಳೂರು ಪುತ್ತೂರು ದೇವಳ ವರ್ಧಂತ್ಯುತ್ಸವ

ಪುತ್ತೂರು ದೇವಳ ವರ್ಧಂತ್ಯುತ್ಸವ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಗುರು ತಂತ್ರಿಯವರ ವೈಧಿಕತ್ವದಲ್ಲಿ ನಡೆಯಿತು.
ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯ ಅವರ ವೈಧಿಕತ್ವದಲ್ಲಿ ಗಣಪತಿ ಹೋಮ, ಚಂಡಿಕಾ ಹೋಮ ಹಾಗೂ ಪ್ರಧಾನ ಅರ್ಚಕ ವೇ.ಮೂ.. ವಿ.ಎಸ್. ಭಟ್ ಅವರ ನೇತೃತ್ವದಲ್ಲಿ ಶತರುದ್ರಾಭಿಷೇಕ ನಡೆಯಿತು. ರಾತ್ರಿ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಬಂಡಿ ಉತ್ಸವ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ದಿನೇಶ್ ಪಿ.ವಿ, ನಳಿನಿ ಪಿ. ಶೆಟ್ಟಿ, ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಹಿರಿಯರಾದ ಕಿಟ್ಟಣ್ಣಗೌಡ ಹಾಗೂ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡರು.