
ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ, ಜು.06 ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹದ ಕಳಸ ವಿದ್ದಂತೆ ಎಂದು ಪೂಜಾರಿ ನಿಂಗಣ್ಣ, ಹೇಳಿದರು.
ತಾಲೂಕಿನ ಹಂಪಾಪಟ್ಟಣ ಗ್ರಾಮದಲ್ಲಿ ಶನಿವಾರ ಜನಸೇವಾ ಟ್ರಸ್ಟ್ (ರಿ.) ಹಾಗೂ ನವೋದಯ ಯುವಕ ಸಂಘ (ರಿ.) ವತಿಯಿಂದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ನೋಟ್ಬುಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ವಿದ್ಯಾರ್ಥಿಗಳು ಮೊಬೈಲ್ನಿಂದ ಸಾಧ್ಯವಾದಷ್ಟು ದೂರವಿದ್ದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಸ್ತು, ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಜನಸೇವಾ ಟ್ರಸ್ಟ್ ಅಧ್ಯಕ್ಷ ಬುಡ್ಡಿ ಬಸವರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಹಾಗೂ ಶಿಕ್ಷಣಕ್ಕೆ ಉತ್ತೇಜನ ನೀಡುವುದು ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ. ಸಮಾಜದ ಸಹಕಾರದಿಂದ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಮುಂದೆಯೂ ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪತ್ರಕರ್ತರಾದ ಸಿ. ಶಿವಾನಂದ್ ಮಾತನಾಡಿ, ಹಂಪಾಪಟ್ಟಣದಂತಹ ದೊಡ್ಡ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸುಸಜ್ಜಿತ ಸರ್ಕಾರಿ ಆಸ್ಪತ್ರೆಯ ಅಗತ್ಯವಿದೆ. ಈ ಸೌಲಭ್ಯಗಳಿಗಾಗಿ ಗ್ರಾಮಸ್ಥರು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಹಾಗೂ ಯುವಕರು ಪಕ್ಷಾತೀತವಾಗಿ ಒಂದಾಗಿ ಹೋರಾಟ ನಡೆಸಬೇಕು. ಒಗ್ಗಟ್ಟಿನ ಹೋರಾಟದಿಂದ ಮಾತ್ರ ಸರ್ಕಾರದ ಗಮನ ಸೆಳೆದು ಈ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ ಎಂದು ಕರೆ ನೀಡಿದರು.
ಪತ್ರಕರ್ತ ಅಶೋಕ ಉಪ್ಪಾರ್
ಗ್ರಾಮ ಪಂಚಾಯಿತಿ ಸದಸ್ಯ ಎನ್. ನಾಗರಾಜ್ ಮಾತನಾಡಿದರು ,
ಈ ವೇಳೆ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ ಹಾಗೂ ಉಚಿತ ನೋಟ್ಬುಕ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಸು.ಸಿ. ಪತ್ರಿಗೀತಮ್ಮ ಯಲ್ಲಪ್ಪ, ಉಪಾಧ್ಯಕ್ಷ ಟಿ. ಮಂಜುನಾಥ್, ಸದಸ್ಯರಾದ ಬಿ. ನಾಗರಾಜ್, ಸಿ.ಎಲ್. ಕುಮಾರ್, ಗಾಳೆಪ್ಪ, , ಪಿ. ಗಣೇಶ್, ಮಂಜುಳಾ ಅಂಜಿನಪ್ಪ, ಮಾರುತಿ ಭಜನಾ ಮಂಡಳಿ ಅಧ್ಯಕ್ಷ ಮಾಲ್ಕಿ ಕೃಷ್ಣಪ್ಪ, ಡಿ.ಎಸ್.ಎಸ್. ಜಿಲ್ಲಾಧ್ಯಕ್ಷ ಹೆಚ್.ಕೆ. ರಾಮು, ನವೋದಯ ಯುವಕ ಸಂಘದ ಅಧ್ಯಕ್ಷ ಯು. ಹನುಮಂತ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಂಟರ ಮಂಜುನಾಥ್, ಪತ್ರಕರ್ತರಾದ ಉಮಾಪತಿ ಶೆಟ್ಟರ್, ರಾಜವಲಿ ಗಡ್ಡದ್, ವೀರೇಶ ಮಜ್ಜಿಗೆ, ಬಿ.ಕೆ. ಬಸವರಾಜ್, ಗಾಳೆಮ್ಮನವರ ಹುಲುಗಪ್ಪ, ಓ. ರಾಘವೇಂದ್ರ, ನವೋದಯ ಯುವಕ ಸಂಘದ ಸದಸ್ಯರು, ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಎಲ್ಐಸಿ ಹುಲುಗಪ್ಪ ಕಾರ್ಯಕ್ರಮ ನಿರೂಪಿಸಿದರು. ಜಿ. ಫಕೀರಪ್ಪ ವಂದನಾರ್ಪಣೆ ಸಲ್ಲಿಸಿದರು. ಮಾಂತೇಶ್ ಮತ್ತು ತಂಡ ಪ್ರಾರ್ಥನಾ ಗೀತೆ ಹಾಗೂ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದರು.





























