Home ಜಿಲ್ಲೆ ಮೈಸೂರು ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, 200 ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನ

ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, 200 ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನ

ಮೈಸೂರು,ಜೂ14: ಕನಕಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಬಸವನಗುಡಿ ವತಿಯಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸುವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ಉದ್ದೇಶದಿಂದ “ಪ್ರತಿಭಾ ಪುರಸ್ಕಾರ 2026” ಕಾರ್ಯಕ್ರಮವನ್ನು ಮೈಸೂರಿನ ಕನಕ ಸಮುದಾಯ ಭವನ, ಸಿದ್ಧಾರ್ಥ ಲೇಔಟ್‍ನಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಯಿತು.


ಕಾರ್ಯಕ್ರಮದಲ್ಲಿ ಶಿಕ್ಷಣ, ಸಮಾಜಸೇವೆ, ವೈದ್ಯಕೀಯ, ಪತ್ರಿಕೋದ್ಯಮ, ಸಾಹಿತ್ಯ, ಸಂಗೀತ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಇದೇ ವೇಳೆ ಸಮಾಜದ ಆರ್ಥಿಕವಾಗಿ ಹಿಂದುಳಿದ 200 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 5,000 ಪೆÇ್ರೀತ್ಸಾಹಧನ ಹಾಗೂ ಪ್ರಶಸ್ತಿ ಪತ್ರ ವಿತರಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಟ್ರಸ್ಟ್ ಕೈಗೊಂಡಿರುವ ಈ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.


ಕಾರ್ಯಕ್ರಮವನ್ನು ಇನ್ಸೈಟ್ಸ್ ಐಎಎಸ್ ಸಂಸ್ಥಾಪಕರಾದ ವಿನಯ್ ಕುಮಾರ್ ಜಿ.ಬಿ. ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಟಿ.ಬಿ. ಬಳಗಾವಿ ವಹಿಸಿದ್ದರು. ಈ ಸಂದರ್ಭದಲ್ಲಿ ಬಿ. ಸುಬ್ರಮಣ್ಯ, ಕನಕಶ್ರೀ ಚಾರಿಟಬಲ್ ಟ್ರಸ್ಟ್‍ನ ಪದಾಧಿಕಾರಿಗಳು, ಟ್ರಸ್ಟಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ನೂರಾರು ವಿದ್ಯಾರ್ಥಿಗಳು ಹಾಗೂ ಪೆÇೀಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ಪದಾಧಿಕಾರಿಗಳು, ಸಮಾಜದಲ್ಲಿ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಉತ್ತೇಜನ ನೀಡುವುದು ಟ್ರಸ್ಟ್‍ನ ಪ್ರಮುಖ ಧ್ಯೇಯವಾಗಿದೆ. ಮುಂದಿನ ದಿನಗಳಲ್ಲಿಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಇನ್ನಷ್ಟು ವಿಸ್ತೃತವಾಗಿ ಆಯೋಜಿಸಲಾಗುವುದು ಎಂದು ತಿಳಿಸಿದರು.


ಪ್ರತಿಭಾವಂತರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಮಾಜದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಕನಕಶ್ರೀ ಚಾರಿಟಬಲ್ ಟ್ರಸ್ಟ್‍ನ ಈ ಕಾರ್ಯಕ್ರಮವು ಅರ್ಥಪೂರ್ಣ ಸಮಾಜಸೇವೆಯ ಮಾದರಿಯಾಗಿ ಗಮನ ಸೆಳೆಯಿತು.