
ಬಂಟ್ವಾಳ- ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಗೆ ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ೧೫ ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಲ್ನಾಡು ನಿವಾಸಿ ಹಿಬ್ಬಾತುಲ್ಲ (೫೨) ಎಂದು ಗುರುತಿಸಲಾಗಿದೆ.
ಬ್ಯಾಂಕ್ನಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಇಬ್ಬರಿಂದ ಹಣ ಪಡೆದು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ವಂಚಿಸಿದ ಆರೋಪದ ಮೇಲೆ ೨೦೧೧ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಿಬ್ಬಾತುಲ್ಲ ವಿರುದ್ಧ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಯ ಭಾಗವಾಗಿ ವಿಟ್ಲ ಪೊಲೀಸರು ಅಕ್ಟೋಬರ್ ೫ ರಂದು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.























