
ಸಂಜೆವಾಣಿ ನ್ಯೂಸ್
ಮೈಸೂರು: ಜೂ.25:- ಶ್ರೀ ಚಾಮುಂಡೇಶ್ವರಿ ಕಾರು ಮಾಲೀಕರು ಮತ್ತು ಚಾಲಕರ ಸಂಘ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧಿಕಾರಿ ವರ್ಗ ಹಾಗೂ ನೌಕರರ ವರ್ಗ,ಶ್ರೀ ಚಾಮುಂಡೇಶ್ವರಿ ಬೆಟ್ಟದ ಬೆಳಿಗ್ಗೆ ಹಾಗೂ ಸಂಜೆಯ ಗೆಳೆಯರ ಬಳಗ,ಮೈಸೂರಿನ ಅನೇಕ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸ್ನೇಹಿತರ ಬಳಗ ,ಇವರುಗಳ ಸಹಯೋಗದೊಂದಿಗೆ ಕಳೆದ ಹಲವಾರು ವರ್ಷಗಳಿಂದ ನಡೆಸುಕೊಂಡು ಬರುತ್ತಿರುವ ಮಹತ್ಕಾರ್ಯ. ಆರ್ಥಿಕವಾಗಿ ಹಿಂದುಳಿದಿರುವ, ಗ್ರಾಮಾಂತರ ಮಟ್ಟದ ಮತ್ತು ಮೈಸೂರು ಸಿಟಿ ಸರ್ಕಾರಿ ಕನ್ನಡ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕಲಿಕಾ ಸಾಮಗ್ರಿಗಳು,ಲಾಂಗ್ ನೋಟ್ ಪುಸ್ತಕ ಮತ್ತು ಶಾಲೆಯ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮ. 20ನೇ ವರ್ಷದ ಈ ಕಾರ್ಯಕ್ರಮ. ಕನ್ನೆಗೌಡನ ಕೊಪ್ಪಲಿನ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ.
ಉಚಿತವಾಗಿ ನೋಟ್ ಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಉದ್ಯಮಿ ಕಿರಣ್. ಚಾಲಕರ ಸಂಘದ ಬೆಟ್ಟದ ಜೋಗಿ ರವಿ. ಮುಂತಾದವರು ಉಪಸ್ಥಿತರಿದ್ದು ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಿದರು.