Home ಜಿಲ್ಲೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ಧ್ವಜಾರೋಹಣ

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ಧ್ವಜಾರೋಹಣ

ಬಳ್ಳಾರಿ, ನ. 01:

 ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಹೂ ಮಾಲೆಯನ್ನು ಹಾಕಿ, ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ಧ್ವಜಾರೋಹಣೆಯನ್ನು ನೆರವೇರಿಸಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಅವರು, ಕನ್ನಡ ಧ್ವಜಾರೋಹಣ ನೆರವೇರಿಸಿ, ದಕ್ಷಿಣ ಭಾರತದಲ್ಲಿಯ ಕನ್ನಡ ಭಾಷಿಕರು ಮತ್ತು ಕನ್ನಡ ಪ್ರಾಂತಗಳನ್ನು ಒಗ್ಗೂಡಿದ ದಿನ. ಮೈಸೂರು ಪ್ರಾಂತವನ್ನು `ಕರ್ನಾಟಕ’ ಎಂದು ನಾಮಕರಣ ಮಾಡಿದ ಈ ದಿನವನ್ನು ಕನ್ನಡ ರಾಜ್ಯೋತ್ಸವವನ್ನಾಗಿ ನಾಡಿನಾದ್ಯಂತ ಅದ್ದೂರಿಯಾಗಿ ಆಚರಿಸಲಾಗುತ್ತದೆ ಎಂದರು.

ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು, 1956ರ ನವೆಂಬರ್ 1 ರಂದು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. 1973ರ ನವೆಂಬರ್ 1 ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ನಮ್ಮ ನಾಡು, ನಮ್ಮ ನುಡಿ, ನಮ್ಮ ಸಂಸ್ಕೃತಿಗಳ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಎಂದರು.

ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಉಪಾಧ್ಯಾಕ್ಷರಾದ ಸೊಂತ ಗಿರಿಧರ, ಪಿ ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ, ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಮಾಜಿ ಅಧ್ಯಕ್ಷರಾದ ಡಾ.ಡಿ.ಎಲ್.ರಮೇಶ ಗೋಪಾಲ್, ವಿವಿಧ‌ ಕಮಿಟಿಗಳ ಚೇರ್ಮನ್ಗಳಾದ ನೇಕಾರ ನಾಗರಾಜ್, ನಾಗಳ್ಳಿ ರಮೇಶ, ಟಿ. ಶ್ರೀನಿವಾಸರಾವ್, ಪಿ. ವೇಣುಗೋಪಾಲಗುಪ್ತಾ, ಜಿತೇಂದ್ರಪ್ರಸಾದ್, ಯು. ಗೋವಿಂದರೆಡ್ಡಿ, ಸುರೇಂದ್ರ ಕುಮಾರ ಭಾಫ್ನಾ, ಕೌಡಕಿ ಹನುಮೇಶಬಾಬು, ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.