
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಅ.05: ಕೆ.ಆರ್.ಪೇಟೆ ಪಟ್ಟಣದಲ್ಲಿ ಧರ್ಮಧ್ವಜ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವ ಹಾಗೂ ಶೋಭಾಯಾತ್ರೆ ಬಿಗಿ ಪೆÇಲೀಸ್ ಭದ್ರತೆಯಲ್ಲಿ ಅದ್ದೂರಿಯಾಗಿ ನಡೆಯಿತು. ಶೋಭಾಯಾತ್ರೆಯಲ್ಲಿ ಶಾಸಕ ಹೆಚ್.ಟಿ.ಮಂಜು ಅವರು ಯುವಕರೊಂದಿಗೆ ತಮಟೆ ಸದ್ದಿಗೆ ಹೆಜ್ಜೆ ಹಾಕಿ ಕೆಲಕಾಲ ನೃತ್ಯ ಮಾಡಿದ್ದು ಗಮನ ಸೆಳೆಯಿತು.
ತಮಟೆ ಹಾಗೂ ವಿವಿಧ ವಾದ್ಯಗಳ ಸದ್ದಿಗೆ ಯುವಕರು, ಯುವತಿಯರು ಹಾಗೂ ವಿದ್ಯಾರ್ಥಿಗಳು ಕುಣಿದು ಸಂಭ್ರಮಿಸಿದರು. ರಂಗಪಯಣ ನಾಟ್ಯಶಾಲೆಯ ಕಲಾವಿದರು ಪ್ರದರ್ಶಿಸಿದ ಭರತನಾಟ್ಯ ಶೋಭಾಯಾತ್ರೆಯ ಮೆರುಗು ಹೆಚ್ಚಿಸಿತು ಉತ್ಸವ ಮೂರ್ತಿಗಳ ಮೆರವಣಿಗೆ ಹಾಗೂ ವಿವಿಧ ಕಲಾ ಪ್ರದರ್ಶನಗಳು ಸಾರ್ವಜನಿಕರ ಗಮನ ಸೆಳೆದವು.
ಶೋಭಾಯಾತ್ರೆಯಲ್ಲಿ ಮನ್ಮುಲ್ ನಿರ್ದೇಶಕ ಡಾಲು ರವಿ, ಆರ್ಟಿಒ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್, ಪುರಸಭೆ ಮಾಜಿ ಅಧ್ಯಕ್ಷ ನಟರಾಜ್, ಮಂಡ್ಯ ಜಿಲ್ಲಾ ಹಾಪ್ಕಾಮ್ಸ್ ಮಾಜಿ ಅಧ್ಯಕ್ಷ ಕೆ.ಜಿ.ತಮ್ಮಣ್ಣ, ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್.ಲೋಕೇಶ್, ಮಾಜಿ ಸದಸ್ಯ ಹೆಚ್.ಡಿ.ಅಶೋಕ್ ಸೇರಿದಂತೆ ಹಲವು ಮುಖಂಡರು ಹಾಗೂ ಸಾವಿರಾರು ಜನರು ಪಾಲ್ಗೊಂಡಿದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ನಾಗಮಂಗಲ ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ಪಟ್ಟಣದಲ್ಲಿ ಬಿಗಿ ಪೆÇಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

























