
ಸಂಜೆವಾಣಿ ನ್ಯೂಸ್
ಮೈಸೂರು: ಸೆ.03:- ಧರ್ಮಸ್ಥಳಕ್ಕೆ ಬಿಜೆಪಿಯವರು ಮಾಡಿದ್ದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿನ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಧÀರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ತನಿಖೆಗೆ ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಧÀರ್ಮಸ್ಥಳ ಪ್ರಕರಣವನ್ನು ಎನ್‍ಐಎ ತನಿಖೆ ಮಾಡಿಸಿ ಅಂತ ಹೇಳುತ್ತಿದ್ದಾರೆ. ಎನ್‍ಐಎ ಅವರು ಪೆÇಲೀಸರೇ, ಎಸ್‍ಐಟಿ ಅವರೂ ಪೆÇಲೀಸರೇ ಆಗಿದ್ದಾರೆ. ನಮ್ಮ ಪೆÇಲೀಸರ ಮೇಲೆ ಬಿಜೆಪಿಗೆ ನಂಬಿಕೆ ಇಲ್ವಾ? ಪ್ರಕರಣ ಸಂಬಂಧ ಬಿಜೆಪಿ ಮೊದಲು ತನಿಖೆ ಮಾಡಿ ಅಂತ ಹೇಳಲೇ ಇಲ್ಲ. ಅಲ್ಲಿ ಯಾವುದೇ ಶವಗಳು ಸಿಗದ ನಂತರ ಹೇಳಿಕೆ ಕೊಡಲು ಶುರು ಮಾಡಿದರು. ಪ್ರಕರಣವನ್ನು ಎಸ್‍ಐಟಿಗೆ ವಹಿಸಿದ ಕ್ರಮವನ್ನು ವೀರೇಂದ್ರ ಹೆಗಡೆ ಅವರೇ ಸ್ವಾಗತ ಮಾಡಿz್ದÁರೆ. ಅವರ ಮೇಲೆ ಆರೋಪವಿದ್ದರೂ ಅವರೆ ಸ್ವಾಗತ ಮಾಡಿ, ನಮ್ಮ ಮೇಲಿನ ಅನುಮಾನದ ತೂಗುಗತ್ತಿ ನಿವಾರಣೆಯಾಗಬೇಕೆಂದಿz್ದÁರೆ. ಎಸ್‍ಐಟಿ ತನಿಖೆ ಸ್ವತಂತ್ರವಾಗಿ ಮಾಡುತ್ತಿದ್ದು, ನಾವ್ಯಾರು ಅದರಲ್ಲಿ ಹಸ್ತಕ್ಷೇಪ ಮಾಡಿಲ್ಲ. ಸತ್ಯ ಹೊರಬರಬೇಕು ಎಂದರು.
ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಹೊರದೇಶಗಳಿಂದ ಹಣ ಬಂದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಹಣ ಬಂದಿದೆ. ವಿರೋಧ, ಟೀಕೆ ಮಾಡಲಿ. ಆದರೆ ಎಲ್ಲಾ ವಿಷಯಗಳನ್ನೂ ರಾಜಕೀಯವಾಗಿ ಬಳಸಲು ಹೋಗಬಾರದು. ಇದರಲ್ಲಿ ಸತ್ಯವಿಲ್ಲ ಎಂದರು.
ಬಿಜೆಪಿ ಯಾರ ಪರ ಇದೆ: ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿz್ದÁರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದೆ? ಒಂದು ಕಡೆ ವೀರೇಂದ್ರ ಹೆಗಡೆಯವರ ಪರ ಎನ್ನುತ್ತಾರೆ ಮತ್ತೊಂದೆÀಡೆ ಸೌಜನ್ಯ ಪರ ಎನ್ನುತ್ತಾರೆ ಎಂದು ಹೇಳಿದರು.
ಸದನದಲ್ಲಿ ಬೇರೆ ಚರ್ಚೆ: ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಕಾಂಗ್ರೆಸ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಸದನದಲ್ಲಿ ಈ ಬಗ್ಗೆ ಚರ್ಚೆಯಾದಾಗ ವಿರೋಧÀ ಪP್ಷÀದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್ ಬೇರೆ ಮಾತನಾಡಿದ್ದರು. ಈಗ ಬೇರೆ ಹೇಳುತ್ತಿz್ದÁರೆ. ಅವರು ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆ ಆಗುವುದು ಎಂದರು.
12 ವರ್ಷಗಳ ಹಿಂದೆ ಯುವತಿ ಅಪಹರಣವಾಗಿರುವುದನ್ನು ಕಣ್ಣಾರೆ ನೋಡಿz್ದÉೀನೆ ಎಂದು ಎಸ್‍ಐಟಿಗೆ ಮಹಿಳೆಯೊಬ್ಬರು ದೂರು ನೀಡಿರುವ ಬಗ್ಗೆ ಮಾತನಾಡಿ, ಇದನ್ನು ಸಿಬಿಐ ತನಿಖೆ ನಡೆದಾಗ ಏಕೆ ಹೇಳಲಿಲ್ಲ? ಸತ್ಯ ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಅಪರಾಧÀ ಎಂದರು.
ಸೌಜನ್ಯ ಪ್ರಕರಣ ಮತ್ತೆ ತನಿಖೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿ, ಸೌಜನ್ಯ ಪ್ರಕರಣದ ಮರು ತನಿಖೆ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ನಾನು ಅದರ ತೀರ್ಪನ್ನು ನೋಡಿಲ್ಲ. ಈ ಬಗ್ಗೆ ಸೌಜನ್ಯ ತಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.
ದಸರಾ ಉದ್ಘಾಟಕರ ಸಂಬಂಧÀ ಬಿಜೆಪಿ ತಗಾದೆ ತೆಗೆಯುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. ಆಗ ಆರೆಸ್ಸೆಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು? 2017ರಲ್ಲಿ ಕವಿ ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದರು. ಆಗ ಇವರೆಲ್ಲ ಎಲ್ಲಿ ಹೋಗಿದ್ದರು? ಬಾನು ಅವರು ಕುಂಕುಮದ ಬಗ್ಗೆ ಮಾತನಾಡಿz್ದÁರೆ ಎನ್ನುವುದು ನನಗೆ ತಿಳಿದಿಲ್ಲ. ಅವರೊಬ್ಬ ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಅಭಿಮಾನ, ಪ್ರೀತಿ ಇಲ್ಲದೆ ಬರೆಯಲು ಸಾಧÀ್ಯವೇ ಎಂದು ಪ್ರಶ್ನಿಸಿದರು.