Home ಜಿಲ್ಲೆ ಮಂಗಳೂರು ಬೆಳ್ತಂಗಡಿ ಪೊಲೀಸರಿಂದ ಬೆಂಗಳೂರಿನಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಬೆಳ್ತಂಗಡಿ ಪೊಲೀಸರಿಂದ ಬೆಂಗಳೂರಿನಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾಷಣ ಪ್ರಸಾರ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಕಳೆದ ೨೦೨೫ರ ಆಗಸ್ಟ್ ೭ರಂದು ಬೆಳ್ತಂಗಡಿ ಕಸಬಾ ಗ್ರಾಮದ ಹುಣ್ಸೆಕಟ್ಟೆ ನಿವಾಸಿ ಜೋರಮ್ ಬರ್ಬೋಝ ಎಂಬುವರು ನೀಡಿದ ದೂರಿನ ಮೇರೆಗೆ ಪುನೀತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಹಲವು ಬಾರಿ ನೋಟಿಸ್ ನೀಡಿದ್ದರೂ, ಪುನೀತ್ ಕೆರೆಹಳ್ಳಿ ಪೊಲೀಸರ ಮುಂದೆ ಹಾಜರಾಗಿರಲಿಲ್ಲ.
ಆರೋಪಿಯು ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದ ಪೊಲೀಸರು, ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಇಂದು ಸಂಜೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.