ಮುಖ್ಯಮಂತ್ರಿ ನಿವಾಸದ ಬಳಿ ಮರ ಬಿದ್ದು ವಾಹನಗಳು ಜಖಂ

ಬೆಂಗಳೂರು,ಜೂ.೧೮-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಬಳಿಯೇ ಬೃಹತ್ ಮರವೊಂದು ಧರೆಗುರುಳಿ ನಾಲ್ಕೈದು ವಾಹನಗಳಿಗೆ ಹಾನಿಯುಂಟಾಗಿದೆ.

ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಹಿನ್ನೆಲೆ ಶಿವಾನಂದ ಬಳಿಯೇ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ.

ಕಳೆದ ಜೂ.೧೫ರಂದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ೨೯ ವರ್ಷದ ಅಕ್ಷಯ್ ಗಂಭೀರವಾಗಿ ಗಾಯಗೊಂಡ ಸವಾರ. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.

ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದಲ್ಲಿ ಕಂಪನಿಯೊಂದದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿದೆ. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿದೆ. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು