
ಸಂಜೆವಾಣಿ ವಾರ್ತೆ
ಚಾಮರಾಜನಗರ ಮಾ.15- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಮಾ.17 ರಂದು ನಗರದಲ್ಲಿ ಜಿಲ್ಲೆಯ ಲಿಂಗೈಕ್ಯ ಪರಮ ಪೂಜ್ಯರ ಸಂಸ್ಕರಣೋತ್ಸವ, ಇತ್ತೀಚೆಗೆ ನಿಧನರಾದ ಶಾಮನೂರು ಶಿವಶಂಕರಪ್ಪ, ಭೀಮಣ್ಣ ಖಂಡ್ರೆ ತಿಪ್ಪಣ್ಣನವರಿಗೆ ನುಡಿ ನಮನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಾಸಭಾದ ಜಿಲ್ಲಾ ನಿರ್ದೇಶಕ ಪ್ರಭುಸ್ವಾಮಿ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆ ನಗರದ ಸತ್ತಿ ರಸ್ತೆಯಲ್ಲಿರುವ ಶ್ರೀ ಶಿವಕುಮಾರಸ್ವಾಮಿ ಭವನದಲ್ಲಿ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿದೇಶಿಕೇಂದ್ರಸ್ವಾಮೀಜಿ ವಹಿಸಲಿದ್ದು, ಹರವೆ ಮಠದ ಶ್ರೀ ಸರ್ಪಭೂಷಣಸ್ವಾಮೀಜಿ, ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮೀಜಿ, ಮಲ್ಲನಮೂಲೆ ಮಠದ ಶ್ರೀ ಇಮ್ಮಡಿ ಸಿದ್ದಲಿಂಗಸ್ವಾಮೀಜಿ, ನಗರ ವಿರಕ್ತ ಮಠದ ಶ್ರೀಚನ್ನಬಸವಸ್ವಾಮೀಜಿ, ಮರಿಯಾಲ ಮಠದ ಇಮ್ಮಡಿ ಮುರುಘರಾಜೇಂದ್ರಸ್ವಾಮೀಜಿ ದಿವ್ಯ ಸಮ್ಮುಖ ವಹಿಸಲಿದ್ದಾರೆ ಎಂದರು. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಚಿವ ಈಶ್ವರ್ ಖಂಡ್ರೆ ಸಮಾರಂಭವನ್ನು ಉದ್ಗಾಟಿಸಲಿದ್ದಾರೆ.
ರಾಜ್ಯಾಧ್ಯಕ್ಷ ಶಂಕರ್ ಬಿದರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ಪರಿಮಳಾ ನಾಗಪ್ಪ, ಪೆÇ್ರ.ಕೆ.ಆರ್.ಮಲ್ಲಿಕಾರ್ಜುನಪ್ಪ, ಸಿ.ಎಸ್.ನಿರಂಜನಕುಮಾರ್, ಕೆಐಎಡಿಬಿ ಮುಖ್ಯ ಅಭಿಯಂತರ ಡಿ.ಆರ್.ವೀರಭದ್ರಯ್ಯ ಮಹಾಸಭಾದ ಅಧ್ಯಕ್ಷ ಎಸ್.ಎಸ್.ಗಣೇಶ್, ನಿವೃತ್ತ ಐಎಎಸ್ ಅಧಿಕಾರಿ ಜಿ.ಎನ್.ಮೂರ್ತಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಮಹಾಸಭಾದ ರಾಷ್ಟ್ರೀಯ ಸಮಿತಿಯ ಸದಸ್ಯ ಎನ್ರಿಚ್ ಮಹದೇವಸ್ವಾಮಿ, ರಾಜ್ಯ ಸಮಿತಿ ಸದಸ್ಯ ಸುಜೇಂದ್ರ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಪ್ರಸಾದ ವಿನಿಯೋಗ ಇರಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಾಸಭಾದ ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿರಂಜನ್ಮೂರ್ತಿ, ಜಿಲ್ಲಾ ನಿರ್ದೇಶಕರಾದ ಬಿಸಲವಾಡಿ ಉಮೇಶ್, ಯಣಗುಂಬ ರಾಜೇಂದ್ರಪ್ರಸಾದ್, ತಾಲೂಕು ಅಧ್ಯಕ್ಷ ಬಾಲಚಂದ್ರಮೂರ್ತಿ, ಹರದನಹಳ್ಳಿ ಹೋಬಳಿ ಅಧ್ಯಕ್ಷ ಶೇಖರ್ ಇದ್ದರು.






























